ಗೋಕರ್ಣದಲ್ಲಿ ಸಮುದ್ರ ಪಾಲಾಗುತಿದ್ದ ಪ್ರವಾಸಿಗನ ರಕ್ಷಣೆ

1356

ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗುತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ರೋಹಿತ್ ಪಾಟೀಲ್ (21)ರಕ್ಷಣೆಗೊಳಗಾದವರಾಗಿದ್ದಾರೆ.

ಐದು ಜನರು ಹುಬ್ಬಳ್ಳಿಯ ರೇಣುಕಾ ನಗರದಿಂದ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಇಳಿದಿದ್ದ ರೋಹಿತ್ ಅಲೆಯ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿದ್ದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಉಪ್ಪಾರ್, ಪ್ರವಾಸಿ ಮಿತ್ರ ಶೇಖರ್ ಹರಿಕಾಂತ್ , ಲೈಫ್ ಗಾರ್ಡ ರವಿ ಪೂಜಾರಿ ರವರು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!