ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲೀಂ ಕುಟುಂಬ

211

ಕಾರವಾರ:- ಧರ್ಮ ಮತ್ತು ಆಚರಣೆಯಲ್ಲಿ ಹಲವು ಭಿನ್ನಾಭಿಪ್ರಾಯಗಳು ಇದ್ದರೂ ನಂಬಿಕೆ ಎನ್ನುವುದು ಅದಕ್ಕಿಂತ ಮಿಗಿಲು ಎನ್ನುವಂತೆ ಮುಸ್ಲಿಂ ಕುಟುಂಬವೊಂದು ಹಿಂದೂ ಪದ್ದತಿಯಲ್ಲಿ ಪಿತೃಕಾರ್ಯ ನಡೆಸಿದೆ.

ಹೌದು ಧಾರವಾಡದ ಮುಸ್ಲೀಂ ಕುಟುಂಬವೊಂದು 2 ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಧಾರವಾಡ ದಲ್ಲಿ ಕಾರ್ಪೆಂಟರ್ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ಇಲ್ಲಿಯ ಪಿತೃಶಾಲೆಯಲ್ಲಿ ಪೂರೈಸಿದ್ದಾರೆ.

ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಮೊರೆ ಹೋಗಿದ್ದೇವೆ. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉಧ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದೇವೆ ಎಂದು ಪಿತ್ರುಕಾರ್ಯದಲ್ಲಿ ಭಾಗಿಯಾದ ಧಾರವಾಡದ ಧಾನೇಶ್ವರಿ ನಗರದ ಮುಸ್ಲಿಂ ಮಹಿಳೆ ಶಂಸಾದ್ ಮಾಹಿತಿ ನೀಡಿದರು.

ಇವರು ಜ್ಯೋತಿಷಿಯು ತೋರಿಸಿದ ಮಾರ್ಗದರ್ಶನದಂತೆ ಗೋಕಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ವೇ. ನಾಗರಾಜ ಭಟ್ ಗುರ್ಲಿಂಗ್ ಹಾಗೂ ವೇ. ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ.
ಗೋಕರ್ಣದಲ್ಲಿ ಕ್ರಿಸ್ಚನ್ ಸಮುದಾಯದವರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲೀಂ ಕುಟುಂಬ ಇದೇ ಮೊದಲ ಬಾರಿಗೆ ಪಿತೃಕಾರ್ಯ ನೆರವೇರಿಸಿದ್ದು ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!