Haliyal|ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ: 18 ಜನರಿಗೆ ಗಾಯ, ಐವರಿಗೆ ಗಂಭೀರ ಗಾಯ
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ (haliyala) ತಾಲೂಕಿನ ಶಿವಪುರ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನ ಅತೀ ವೇಗದಿಂದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:-Haliyal| ಬಿಜೆಪಿOBC ಜಿಲ್ಲಾ ಕಾರ್ಯದರ್ಶಿಯಿಂದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ -ದೂರು ದಾಖಲು
ಮುಂಡವಾಡ ಗ್ರಾಮದ ಕೂಲಿ ಕಾರ್ಮಿಕರು ಕೃಷಿ ಕೆಲಸಕ್ಕಾಗಿ ಶಿವಪುರ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಟಾಟಾ ಎಸ್ (ಪಿಕಪ್) ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಮಹಿಳೆಯರು ಸೇರಿದಂತೆ ಎಲ್ಲ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅವರಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ಹಳಿಯಾಳ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ.

ಇದನ್ನ ಓದಿ:-Haliyal|ಕಾಡುಪ್ರಾಣಿ ಬೇಟೆಗೆ ಇಟ್ಟಿದ್ದ ನಾಡಬಾಂಬ್ ಸ್ಟೋಟ-ಹಲವು ಮನೆಗಳಿಗೆ ಹಾನಿ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಹಳಿಯಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಅತೀ ವೇಗವೇ ಕಾರಣವಾಗಿದ್ದರೂ, ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದು, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅತೀ ವೇಗ ತಂದ ಅಪಘಾತ
ಇನ್ನು ವಾಹನವು ಅತೀ ವೇಗದಿಂದ ಈ ಅಪಘಾತ ಆಗಿದೆ ಎಂದು ತಿಳಿದುಬಂದಿದ್ದು ,ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
