ಬೀದಿನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಅಂದ್ರೆ ಹಿಂಸಾತ್ಮಕವಾಗಿ ಹಿಡಿದು ಕಾಡುಪ್ರಾಣಿಗಳ ಆಹಾರಕ್ಕಾಗಿ ಕಾಡಿಗೆ ಬಿಟ್ಟ ಹಳಿಯಾಳ ಪುರಸಭೆ ಸಿಬ್ಬಂದಿ!

645

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದೆ.ಜಿಲ್ಲೆಯಲ್ಲಿ ಬೀದಿ ನಾಯಿಗಳಿಂದ ಕಚ್ಚಿಸಿಕೊಂಡವರು ಬರೋಬ್ಬರಿ 6533 ಜನ ಹೀಗಾಗಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸ್ಥಳೀಯ ಆಡಳಿತ ನಾಯಿಗಳ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದೆ. ಇದರ ಭಾಗವಾಗಿ ಖಾಸಗಿಯವರೊಂದಿಗೆ ಸ್ಥಳೀಯ ಆಡಳಿತದ ಸಿಬ್ಬಂದಿಗಳು ಸೇರಿ ಬೀದಿನಾಯಿಗಳನ್ನ ಹಿಡಿದು ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದೆ.

ಆದ್ರೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದ ಪುರಸಭೆಯ ಸಿಬ್ಬಂದಿಗಳು ಮಾತ್ರ ಬೀದಿನಾಯಿಗಳನ್ನು ಹಿಡಿಯುವುದರಲ್ಲಿ ರಾಕ್ಷಸ ತನ ತೋರಿದ್ದಾರೆ.

ಹೌದು ಹಳಿಯಾಳ ನಗರದಲ್ಲಿ ಬೀದಿ ಬೀದಿಗಳನ್ನು ಜಾಲಾಡಿದ ಪುರಸಭೆ ಸಿಬ್ಬಂದಿ ಬೇಕಾ ಬಿಟ್ಟಿ ಬೀದಿನಾಯಿಗಳನ್ನು ನಿಯಮ ಮೀರಿ ಹಿಂಸಾತ್ಮಕ ರೀತಿಯಲ್ಲಿ ಬೀದಿ ನಾಯಿಗಳನ್ನು ಹಿಡಿದಿದ್ದಾರೆ. ಇನ್ನೂರಕ್ಕೂ ಹೆಚ್ಚು ಬೀದಿನಾಯಿಗಳನ್ನು ಹಿಡಿದ ಪುರಸಭೆ ಸಿಬ್ಬಂದಿಗಳು ಮಾಡಿದ್ದ ಕೆಲಸ ಮಾತ್ರ ಎಡವಟ್ಟಿನದ್ದು.

ಬೀದಿ ನಾಯಿಗಳನ್ನು ಹಿಂಸಾತ್ಮಕವಾಗಿ ಹಿಡಿದು ಹಳಿಯಾಳ ದಿಂದ ಯಲ್ಲಾಪುರ ಭಾಗದ ಕಾಡಿನಲ್ಲಿ 80 ಕ್ಕೂ ಹೆಚ್ಚು ನಾಯಿಗಳನ್ನು ತಂದು ಬಿಟ್ಟಿದ್ದಾರೆ. ಈ ಭಾಗದಲ್ಲಿ ಹೆಚ್ಚು ಕಾಡು ಇದ್ದು, ಚಿರುತೆ,ಹುಲಿಗಳಿವೆ. ಹೀಗೆ ಬೇಕಾಬಿಟ್ಟಿ ಕಾಡಿನಲ್ಲಿ ಬಿಟ್ಟಿದ್ದರಿಂದ ಇದೀಗ ಬೀದಿ ನಾಯಿಗಳಿಗೆ ಆಹಾರ ವಿಲ್ಲದೇ ಸಾಯುವ ಆತಂಕವಿದ್ದರೆ, ಕಾಡುಪ್ರಾಣಿಗಳಿಗೆ ಸುಲಭವಾಗಿ ಆಹಾರ ವಾಗುತ್ತಿವೆ.

ಪುರಸಭೆ ಸಿಬ್ಬಂದಿಗಳು ಮಾಡಿದ ಅಚಾತುರ್ಯದ ಕೆಲಸಕ್ಕೆ ಪ್ರಾಣಿ ಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಹಳಿಯಾಳದ ಮಾತೃಭೂಮಿ ಪ್ರತಿಷ್ಠಾನದ ಉಪಾಧ್ಯಕ್ಷ ಹಾಗೂ ಪತ್ರಕರ್ತ S.K.ಯೋಗರಾಜ್ ರವರು ಪುರಸಭೆ ಸಿಬ್ಬಂದಿಗಳ ಅಮಾನುಷ ವರ್ತನೆಯ ವಿರುದ್ಧ ದೂರು ದಾಖಲಿಸಿದ್ದಾರೆ. ಇದಲ್ಲದೇ ಪಶುಸಂಗೋಪನ ಇಲಾಖೆಯಿಂದಲೂ ಪುರಸಭೆ ಸಿಬ್ಬಂದಿ ಕೃತ್ಯಕ್ಕೆ ನೋಟಿಸ್ ಜಾರಿಮಾಡಿದ್ದು ,ಇದೀಗ ಹಳಿಯಾಳ ತಾಲೂಕಿನಲ್ಲಿ ಪುರಸಭೆ ಕಾರ್ಯಕ್ಕೆ ಸಾರ್ವಜನಿಕರಿಂದ ತೀವ್ರ ವಿರೊಧ ವ್ಯಕ್ತವಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!