ಸ್ವಂತ ಉದ್ಯೋಗ ಮಾಡುವವರಿಗೊಂದು ಅವಕಾಶ|ಏನೆಲ್ಲಾ ಉಚಿತ ತರಬೇತಿ ನೀಡಲಾಗುತ್ತೆ? ವಿವರ ನೋಡಿ ಅರ್ಜಿ ಸಲ್ಲಿಸಿ.

250

ಕಾರವಾರ:- ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ 30 ದಿನಗಳ ಜೆ ಸಿ ಬಿ ಆಪರೇಟಿಂಗ್ ಟ್ರೈನಿಂಗ್ ಮತ್ತು ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ಮತ್ತು ರಿಪೇರಿ ತರಬೇತಿ ಹಾಗೂ ರೆಫ್ರೀಜಿರೇಶನ್ ಏರ್ ಕಂಡೀಷನ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಡಿಸೆಂಬರ್ 25 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಜನವರಿ ತಿಂಗಳಲ್ಲಿ ಪ್ರಾರಂಭವಾಗಲಿದೆ.

ತರಬೇತಿಯೂ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ
ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ,
ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ
ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9483485489, 08284-295307, ಗೆ ಸಂಪರ್ಕಿಸಿ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!