Power cut|ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನಲ್ಲಿ ಆಗಷ್ಟ್ 05 ವಿದ್ಯುತ್ ವತ್ಯಯ.

ಕಾರವಾರ: ನಿರ್ವಹಣೆ ಹಾಗೂ ತುರ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಕಾರವಾರದ ವಿವಿಧ ಪ್ರದೇಶಗಳಲ್ಲಿ ಆ.5ರಂದು ನಿಗದಿತ ಅವಧಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಿಸಿದೆ.
ಹೊನ್ನಾವರದಲ್ಲಿ(honnavar) ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ.
ಹೊನ್ನಾವರ ತಾಲೂಕಿನ ಪಟ್ಟಣ ಶಾಖೆ ವ್ಯಾಪ್ತಿಯ ಎಲ್.ಐ.ಸಿ ಹಾಗೂ ಕರ್ಕಿ 11 ಕೆ.ವಿ. ಫೀಡರ್ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ.5ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್.ಐ.ಸಿ ಮತ್ತು ಕರ್ಕಿ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಕಾರವಾರದಲ್ಲಿ (karwar)ಬೆಳಗ್ಗೆ 9.30 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ
ಕಾರವಾರ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ಲೈನ್ ನಿರ್ವಹಣೆ ಹಾಗೂ ವಾಹಕ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ.5ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆ.ಹೆಚ್.ಬಿ, ತೇಲಂಗ್ ರೋಡ್ ಹಾಗೂ ಕೆರವಡಿ ಫೀಡರ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಸ್ಕಾಂ ಪ್ರಕಟಣೆಯ ಪ್ರಕಾರ, ಕಾಮಗಾರಿ ಅವಧಿಯಲ್ಲಿ ಗ್ರಾಹಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.
