Honnavar| ಶಾಲೆಯಲ್ಲಿ ಮಕ್ಕಳಿಗೆ ಶೌಚಕ್ಕೂ ಅವ್ಯವಸ್ಥೆ – ಬಾವಿಯಿಂದ ನೀರು ಸೇದಿ ಬಕೇಟ್ ಹೊತ್ತು ಹೋಗುವ ಪುಟ್ಟ ಮಕ್ಕಳು!

Honavar government school students carrying water buckets to use the toilet due to lack of water facility Honavar government school students carrying water buckets to use the toilet due to lack of water facility
Honavar government school students carrying water buckets to use the toilet due to lack of water facility

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

ಹೊನ್ನಾವರ: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯ ಕಲ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲೂ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ.ಇದನ್ನೂ ಓದಿ:-Honnavar| ಹಳಿದಿಪುರದಲ್ಲಿ ಇಸ್ರೇಲ್ ಪ್ರಜೆ ಹೊನ್ನಾವರ ಪೊಲೀಸರ ವಶಕ್ಕೆ -ಕಾರಣ ಏನು?

ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ(honnavar) ತಾಲೂಕಿನ ಹೊದಕೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಸೌಕರ್ಯ ಹಾಗೂ ಸ್ವಚ್ಛತೆಯ ಕೊರತೆಯ ಬಗ್ಗೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಒಟ್ಟು 36 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮುಖ್ಯ ಶಿಕ್ಷಕಿ ಸೇರಿದಂತೆ ಇಬ್ಬರು ಶಿಕ್ಷಕಿಯರು ಹಾಗೂ ಓರ್ವ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಶಾಲಾ ಆವರಣದಲ್ಲಿ ಸ್ವಚ್ಛತೆಯ ಕೊರತೆ ಕಂಡುಬರುತ್ತಿದೆ ಎಂಬುದು ಪೋಷಕರ ಆರೋಪ.

Advertisement

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ತಂತಿ

ಶಾಲೆಯಲ್ಲಿರುವ ಬಾವಿಗೆ ಅಳವಡಿಸಲಾಗಿರುವ ವಿದ್ಯುತ್ ತಂತಿ ನೆಲದ ಸಮೀಪದಲ್ಲೇ ಇರುವುದರಿಂದ ಮಕ್ಕಳ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ವಲ್ಪ ನಿರ್ಲಕ್ಷ್ಯವಾದರೂ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ಇದನ್ನೂ ಓದಿ:-Honnavar|ವೃದ್ದರೇ ಈತನಿಗೆ ಟಾರ್ಗೆಟ್ – ಡ್ರಾಪ್ ಕೊಡೋ ನೆಪದಲ್ಲಿ ಹಣ ಸುಲಿಗೆ ಮಾಡುತಿದ್ದ ಯುವಕನ ಬಂಧನ

ಇನ್ನು ಶಾಲೆಯ ಮೇಲ್ಭಾಗದಲ್ಲಿ ಬೇಕಾಬಿಟ್ಟಿಯಾಗಿ ಅಳವಡಿಸಿರುವ ತಗಡಿನ ಶೀಟ್‌ಗಳ ಬಗ್ಗೆಯೂ ಆತಂಕ ವ್ಯಕ್ತವಾಗಿದೆ. ಬಲವಾದ ಗಾಳಿ ಬೀಸಿದ ಸಂದರ್ಭದಲ್ಲಿ ಶೀಟ್‌ಗಳು ಕೆಳಗೆ ಬೀಳುವ ಅಪಾಯವಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಶೌಚಾಲಯಕ್ಕೆ ನೀರಿಲ್ಲ – ಬಾವಿಯಿಂದ ನೀರು ಸೇದುತ್ತಿರುವ ಮಕ್ಕಳು

ಹೊನ್ನಾವರ ಹೊದಕೆ ಸರ್ಕಾರಿ ಶಾಲೆಯಲ್ಲಿ ಶೌಚಾಲಯಕ್ಕೆ ಬಕೇಟ್‌ನಲ್ಲಿ ನೀರು ಹೊತ್ತುಕೊಂಡು ಹೋಗುತ್ತಿರುವ ಮಕ್ಕಳು
ಹೊನ್ನಾವರ ಹೊದಕೆ ಸರ್ಕಾರಿ ಶಾಲೆಯಲ್ಲಿ ಶೌಚಾಲಯಕ್ಕೆ ಬಕೇಟ್‌ನಲ್ಲಿ ನೀರು ಹೊತ್ತುಕೊಂಡು ಹೋಗುತ್ತಿರುವ ಮಕ್ಕಳು

ಶಾಲೆಯ ಪುಟ್ಟ ಮಕ್ಕಳಿಗೆ ಶೌಚಾಲಯ ಬಳಕೆಗೆ ಅಗತ್ಯ ನೀರಿನ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಎನ್ನಲಾಗಿದೆ.

ಶೌಚಾಲಯಕ್ಕೆ ನೀರು ಪೂರೈಸುವ ನಳ ತುಂಡಾಗಿ ಹಲವು ತಿಂಗಳುಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಮಕ್ಕಳು ಬಾವಿಯಿಂದ ನೀರು ಸೇದಿ, ಬಕೇಟ್‌ನಲ್ಲಿ ನೀರು ತುಂಬಿಕೊಂಡು ಶೌಚಾಲಯಕ್ಕೆ ತೆಗೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.

ಪುಟ್ಟ ಮಕ್ಕಳು ಭಾರವಾದ ಬಕೇಟ್‌ಗಳನ್ನು ಹೊತ್ತುಕೊಂಡು ಶೌಚಾಲಯಕ್ಕೆ ತೆರಳುತ್ತಿರುವುದು ಶಾಲೆಯ ಮೂಲಸೌಕರ್ಯದ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ವಿರುದ್ಧ ಪೋಷಕರ ಆರೋಪ

ಇನ್ನು ಶಾಲೆಯಲ್ಲಿ ಶಿಕ್ಷಕರು ಸಮರ್ಪಕವಾಗಿ ಪಾಠ ಮಾಡುತ್ತಿಲ್ಲ ಎಂಬ ಆರೋಪವನ್ನೂ ಕೆಲವು ಪೋಷಕರು ಮಾಡಿದ್ದಾರೆ.

ಶಿಕ್ಷಕರು ಶಾಲೆಗೆ ಬಂದು ವಿಶ್ರಾಂತಿ ಪಡೆಯುತ್ತಾರೆ, ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ ಹಾಗೂ ಶಾಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದರೂ ಸ್ಪಂದಿಸುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗೆ ದಾಖಲಿಸಿದ್ದೇವೆ. ಆದರೆ ಮಕ್ಕಳಿಗೆ ಪಾಠ ಕಲಿಸುವ ಬದಲು ಶಾಲೆಯ ಅವ್ಯವಸ್ಥೆಯಿಂದಾಗಿ ಮಕ್ಕಳು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂಬುದು ಪೋಷಕರ ಅಳಲು. ಇದನ್ನೂ ಓದಿ:- Karwar | 20 ವರ್ಷಗಳ ಸೇವೆಯ ಬಳಿಕ ICGS ಸಾವಿತ್ರಿಬಾಯಿ ಫುಲೆ ನೌಕೆ ಡಿ-ಕಮಿಷನ್

ಶಿಕ್ಷಣಾಧಿಕಾರಿಗಳಿಗೆ ದೂರು

ಶಾಲೆಯ ಮುಖ್ಯ ಶಿಕ್ಷಕಿಯ ನಿರ್ಲಕ್ಷ್ಯ ಮತ್ತು ಜವಾಬ್ದಾರಿಯ ಕೊರತೆಯ ಕುರಿತು ಶಿಕ್ಷಣಾಧಿಕಾರಿಗಳಿಗೆ ಪೋಷಕರು ದೂರು ನೀಡಿದ್ದಾರೆ ಎನ್ನಲಾಗಿದೆ.

ಇದೀಗ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಕ್ಕಳ ಸುರಕ್ಷತೆ ಹಾಗೂ ಮೂಲಸೌಕರ್ಯದ ಸಮಸ್ಯೆಗಳನ್ನು ಪರಿಹರಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸುರಕ್ಷಿತ ಹಾಗೂ ಸ್ವಚ್ಛ ವಾತಾವರಣ ಒದಗಿಸುವ ಜವಾಬ್ದಾರಿ ಯಾರದ್ದು? ಎಂಬ ಪ್ರಶ್ನೆ ಇದೀಗ ಎದುರಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement