Honnavar |ಗೇರುಸೊಪ್ಪ ಬಳಿ ಕಾರು ಅಪಘಾತ| ಇಬ್ಬರು ಸಜೀವ ದಹನ

Honnavar news:-Two people were burnt alive after a car overturned and caught fire near Gerusoppa–Sulemurki Cross
Car completely burnt after a fatal accident near Gerusoppa in Honnavar, Uttara Kannada district, where two occupants were burnt alive. Car completely burnt after a fatal accident near Gerusoppa in Honnavar, Uttara Kannada district, where two occupants were burnt alive.
Honnavar | Car Accident Near Gerusoppa | Two Burnt Alive

Honnavar |ಗೇರುಸೊಪ್ಪ ಬಳಿ ಕಾರು ಅಪಘಾತ| ಇಬ್ಬರು ಸಜೀವ ದಹನ

 

Honnavar news:-ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ(honnavar) ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ.

Advertisement

ನಿನ್ನೆ ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಕಂದಕಕ್ಕೆ ಉರುಳಿರುವ ಅನುಮಾನ ವ್ಯಕ್ತವಾಗಿದೆ.

Car completely burnt after a fatal accident near Gerusoppa in Honnavar, Uttara Kannada district, where two occupants were burnt alive.
Honnavar | Car Accident Near Gerusoppa | Two Burnt Alive

ಅಪಘಾತದ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.

Honnavar|ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬೊಲೆರೋ ವಾಹನ ಸಂಪೂರ್ಣ ಬೆಂಕಿಗಾಹುತಿ.

ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡಿದ್ದು, ಇಬ್ಬರೂ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಹಾಗೂ ಮೃತರ ಗುರುತು ಪತ್ತೆಯಾಗದಷ್ಟು ಸುಟ್ಟು ಕರಕಲಾಗಿದೆ.

ಕಾರಿನ ನಂಬರ್ ಪ್ಲೇಟ್ ಸಹ ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ, ವಾಹನದ ಮಾಲೀಕತ್ವ ಹಾಗೂ ಮೃತರ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಸ್ತುತ ಕಾರು ಮತ್ತು ಮೃತರ ಗುರುತು ಪತ್ತೆಗಾಗಿ ಪೊಲೀಸರು ವಿಶೇಷ ತನಿಖೆ ಕೈಗೊಂಡಿದ್ದಾರೆ.

Honnavar| ಶಾಲಾ ಪ್ರವಾಸಿ ಬಸ್ ಪಲ್ಟಿ |ವಿದ್ಯಾರ್ಥಿ ಸಾವು 26 ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಗಾಯ

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಮೃತರ ವಿವರ ಪತ್ತೆ ಹಚ್ಚುವ ಕೆಲಸ ಮುಂದುವರಿದಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement