Honnavar|ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೂ ಕುಸಿತ ಏಕಮುಖ ಸಂಚಾರ ಬಂದ್

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆ ಸುರಿಯುತಿದ್ದು ಹೊನ್ನಾವರ(honnavar) ತಾಲೂಕಿನ ರಾಮತೀರ್ಥ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು ಹೆದ್ದಾರಿಯಮೇಲೆ ಬಿದ್ದಿದೆ.
ಇದನ್ನೂ ಓದಿ:-Kumta :ದೇವಿಮನೆ ಘಟ್ಟದಲ್ಲಿ ಅಲ್ಪ ಪ್ರಮಾಣದ ಗುಡ್ಡ ಕುಸಿತ ಬುಡಸಮೇತ ಕಿತ್ತುಬಿದ್ದ ಮರ-ಕಡಲತೀರದಲ್ಲಿ ಕಡಲ ಕೊರೆತ
ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ದೊಡ್ಡ ಅವಘಡ ಸಂಭವಿಸುವುದು ತಪ್ಪಿದೆ.ಹೊನ್ನಾವರ ಭಾಗದಿಂದ ಮಂಗಳೂರ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿ ಮಾರ್ಗದ ರಸ್ತೆ ಇದಾಗಿದ್ದು ,ಮಳೆಯ ಅಬ್ಬರಕ್ಕೆ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ.ಗುಡ್ಡ ಕುಸಿತ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು,ಹೆದ್ದಾರಿ ಪ್ರಾಧಿಕಾರ ಹಾಗೂ ಐ.ಆರ್ .ಬಿ ಸಿಬ್ಬಂದಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ:-Ankola:ಅವರ್ಸಾ ಬಳಿ ಖಾಸಗಿ ಬಸ್ ಪಲ್ಟಿ ತಪ್ಪಿದ ದುರಂತ
ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವುದರಿಂದ ಹಾಗೂ ಗುಡ್ಡದ ಮೇಲ್ಭಾಗದಲ್ಲಿ ಬಿರುಕುಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸದ್ಯ ಆ ಪ್ರದೇಶದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
