BREAKING NEWS
Search

ಹೊನ್ನಾವರ:ಸಾಗರ ಮೂಲದ ಮಿನಿ ಬಸ್ ಪಲ್ಟಿ-10 ಜನರಿಗೆ ಗಾಯ.

2384

ಕಾರವಾರ :- ಹೊನ್ನಾವರ ತಾಲೂಕಿನ ಖರ್ವಾ-ಯಲಗುಪ್ಪಾ ಮಾರ್ಗದ ಬಳಿ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಮಿನಿ ಬಸ್ ಟಯರ್ ಸಿಡಿದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿ ಅದರಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗೊಂಡ ಭಾನುವಾರ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರ ಮಾರ್ಗವಾಗಿ ಕುಮಟಾಕ್ಕೆ ತೆರಳುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪಲ್ಟಿಯಾಗಿದೆ.

ಮಿನಿ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರು ಕುಮಟಾಕ್ಕೆ ಸಂಬಂಧಿಕರೋರ್ವರು ಮನೆಗೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಟಯರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ಮಾರ್ಗದ ವಿರುದ್ದ ದಿಕ್ಕಿನಲ್ಲಿ ತಿರುಗಿ ಬಿದ್ದಿದೆ.

20ಕ್ಕು ಅಧಿಕ ಪ್ರಯಾಣಿಕರು ಬಸ್ ನಲ್ಲಿದ್ದು ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದೆ .

ಘಟನಾ ಸ್ಥಳಕ್ಕೆ ಪಿ.ಎಸ್.ಐ ಶಶಿಕುಮಾರ್ ಸಿ.ಆರ್, ಸಿಬ್ಬಂದಿ ವರ್ಗ ಭೇಟಿ ನೀಡಿ ಗಂಭೀರ ಗಾಯಾಳುಗಳನ್ನು ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಹಾಗೂ ಪಟ್ಟಣದ ಎರಡು ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ.

ವಾಹನ ಅಪಘಾತವಾದ ಹಿನ್ನಲೆಯಲ್ಲಿ ಘಟನಾ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು ಪೊಲೀಸರು ಸ್ಥಳದಲ್ಲೆ ಇದ್ದು ಸುಗಮ ಸಂಚಾರಕ್ಕೆ ಅನೂಕೂಲ ಮಾಡಿಕೊಟ್ಟರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!