Honnavara|ಟ್ಯಾಂಕರ್ ಪಲ್ಟಿ – ಹೆದ್ದಾರಿಯಲ್ಲಿ ಅನಿಲ ಸೋರಿಕೆ

173

ಕಾರವಾರ:-ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ
ಟ್ಯಾಂಕರ್ ನಿಂದ ಅನಿಲ ಸೋರಿಕೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66 ರ ಶರಾವತಿ ಸರ್ಕಲ್ ಬಳಿ ಇಂದು ನಡೆದಿದೆ.

ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ತಿರುವಿನಲ್ಲಿ ಪಲ್ಟಿಯಾಗಿದ್ದು ಚಾಲಕನಿಗೆ ಗಂಭೀರ ಗಾಯವಾಗಿದ್ದು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟ್ಯಾಂಕರ್ ಪಲ್ಟಿಯಿಂದಾಗಿ ಕೆಲವು ಸಮಯ ರಾಷ್ಟ್ರೀಯ ಹೆದ್ದಾರಿ 66 ರ ಕಾರವಾರ -ಮಂಗಳೂರು ರಸ್ತೆ ಸಂಚಾರವನ್ನು ಕೆಲವು ಸಮಯ ಬಂದ್ ಮಾಡಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಅನಾಹುತವಾಗದಂತೆ ತಡೆದಿದ್ದು ಟ್ಯಾಂಕರ್ ನನ್ನು ಮೇಲೆತ್ತಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!