ಹತ್ತು ಲಕ್ಷ ಲಂಚ-ಉಪವಿಭಾಗಾಧಿಕಾರಿ ಕಾವ್ಯರಾಣಿ ಲೋಕಾಯುಕ್ತ ಬಲೆಗೆ

ಹತ್ತು ಲಕ್ಷ ಲಂಚ-ಉಪವಿಭಾಗಾಧಿಕಾರಿ ಕಾವ್ಯರಾಣಿ ಲೋಕಾಯುಕ್ತ ಬಲೆಗೆ-ಹೆಚ್ಚಿನ ವಿವರ ನೋಡಿ.
ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದ ಸಾಂದರ್ಭಿಕ ಚಿತ್ರ. ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದ ಸಾಂದರ್ಭಿಕ ಚಿತ್ರ.
ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದ ಸಾಂದರ್ಭಿಕ ಚಿತ್ರ.

ಹತ್ತು ಲಕ್ಷ ಲಂಚ-ಉಪವಿಭಾಗಾಧಿಕಾರಿ ಕಾವ್ಯರಾಣಿ ಲೋಕಾಯುಕ್ತ ಬಲೆಗೆ

Auro wash laundry solutions karwar-uttara Kannada
Auro wash laundry solutions karwar

ಮೈಸೂರು:-ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಎಸಿ ಆಗಿ ಇದೀಗ ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿಯಾಗಿರು  ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾ‌ರ್ ಸೋಮವಾರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತಕ್ಕೆ ದೂರು ಬಂದ ಬೆನ್ನಲ್ಲೇ ತನಿಖಾಧಿಕಾರಿ ರವಿಕುಮಾ‌ರ್, ಮಡಿಕೇರಿ ಡಿವೈಎಸ್‌ಪಿ ದಿನಕರಶೆಟ್ಟಿ, ಇನ್‌ಸ್ಪೆಕ್ಟ‌ರ್ ವೀಣಾ ನಾಯಕ್‌ ಮತ್ತು ಸಿಬ್ಬಂದಿ ಈ ದಾಳಿ ನಡೆದಿದೆ.

Advertisement

ಕಾರ್ಯಾಚರಣೆ ಯಲ್ಲಿ ₹5.5ಲಕ್ಷ ಹಣ ಪಡೆಯುವಾಗ ಈ ದಾಳಿ ನಡೆದಿದ್ದು ಹಣದ ಸಮೇತ ವಶಕ್ಕೆ ಪಡೆಯಲಾಗಿದೆ.

ಘಟನೆ ಏನು?

ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್‌.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ ₹10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ ₹ 5 ಲಕ್ಷ ಕಾವ್ಯರಾಣಿ ಪಡೆದುಕೊಂಡಿದ್ದರು.

ಇದನ್ನೂ ಓದಿ:-Karwar| ಗೋವಾದಲ್ಲಿ 48 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಿದ ಕಾರವಾರ ಪೊಲೀಸರು.

2ನೇ ಕಂತಿನ ₹ 5.50 ಲಕ್ಷವನ್ನು ಕೊಡುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿಯು ಹಣವನ್ನು ಮನೆಯಲ್ಲಿ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಶೈಲೇಂದ್ರ ರವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement