BREAKING NEWS
Search

ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆ ನಿರ್ಲಕ್ಷ-ರವೀಂದ್ರ ನಾಯ್ಕ.

347

ಶಿರಸಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ವಿಶ್ವಾಸವಿತ್ತು. ಆದರೆ ಅದು ಹುಸಿಯಾಯಿಗಿದೆ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಬೇಸರ ವ್ಯಕ್ತಪಡಿಸಿದ್ದಾರೆ.

ಅನಧೀಕೃತ ಅರಣ್ಯವಾಸಿಗಳನ್ನು ತಕ್ಷಣ ಒಕ್ಕಲೆಬ್ಬಿಸಬೇಕು, ಸರಕಾರದ ಯಾವುದೇ ಸೌಲಭ್ಯ, ಸವಲತ್ತುಗಳನ್ನ ನಿರ್ಬಂಧಿಸಬೇಕು ಎಂದು ಕೆಲ ತಿಂಗಳ ಹಿಂದೆ ಸುಪ್ರಿಂ ಕೋರ್ಟ್ ನಲ್ಲಿ ಪರಿಸರವಾದಿಗಳು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ರಾಜ್ಯ ಸರ್ಕಾರ ಅಧಿವೇಶನದಲ್ಲಿ ಚರ್ಚಿಸಿ ಅರಣ್ಯವಾಸಿಗಳ ಪರ ಪ್ರಮಾಣಪತ್ರ ಸಲ್ಲಿಸಲು ನಿರ್ಣಯಿಸಬೇಕಿತ್ತು ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯವಾಸಿಗಳ ಮೇಲೆ ನಡೆಯುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯ, ಅರಣ್ಯ ಹಕ್ಕು ಕಾಯ್ದೆಯ ಅಸಮರ್ಪಕ ಅನುಷ್ಠಾನದ ಬಗ್ಗೆ ಸದನದಲ್ಲಿ ಯಾವೊಬ್ಬ ಜನಪ್ರತಿನಿಧಿಯೂ ಮಾತನಾಡಿಲ್ಲ. ಇದು ಅರಣ್ಯವಾಸಿಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂಬುದನ್ನು ಸ್ಪಷ್ಟಪಡಿಸಿದಂತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!