BREAKING NEWS
Search

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತ ಸಮಿತಿಗೆ ಆದಾಯ ಇಲಾಖೆ ನೋಟಿಸ್

163

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ (gokarna mahabaleshwara temple) ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ₹ 1.38 ಕೋಟಿ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

2015-16ನೇ ಸಾಲಿನಲ್ಲಿ ರಾಮಚಂದ್ರಾಪುರ ಮಠ (Ramachandrapura mata)ದಿಂದ ದೇವಸ್ಥಾನದ ಆಡಳಿತ ನಡೆಸುತಿದ್ದ ಸಂದರ್ಭದಲ್ಲಿ ಹಣಕಾಸಿನ ವ್ಯವಹಾರದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನಲೆ ಆಡಳಿತ ಮಂಡಳಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್‌ ನೀಡಿದ್ದು ಈ ಕುರಿತು ಆಡಳಿತ ಮಂಡಳಿಯ ಅಧ್ಯಕ್ಷರಾಗಿರು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದಲ್ಲಿ ಇರುವ ದೇವಸ್ಥಾನ ಆಡಳಿತ ಮಂಡಳಿಯು ತುರ್ತಾಗಿ
ಆನ್ ಲೈನ್ ಮೂಲಕ ದೇವಸ್ಥಾನ ಉಸ್ತುವಾರಿ ಸಮಿತಿ ಸಭೆ ನಡೆಸಿದ್ದು ದಂಡದ ಮೊತ್ತದ 20ರಷ್ಟು ( ₹27.65 ಲಕ್ಷ) ಹಣ ಕಟ್ಟಲು ತೀರ್ಮಾನ ಮಾಡಿದೆ.

ಉಳಿದ ಮೊತ್ತ ಕಟ್ಟಲು ಕೋರ್ಟ ಮೂಲಕ ತಡೆಯಾಜ್ಞೆ ಪಡೆಯಲು ಸಮಿತಿ ನಿರ್ಧಾರಿಸಿದ್ದು 2008ರಿಂದ ಈವರೆಗಿನ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಲೆಕ್ಕ ಪರಿಶೋಧಕರನ್ನು ನೇಮಿಸಿ ಅವರು ನೀಡಿದ ವರದಿಯಂತೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬ ನಿರ್ಣಯ ಕೈಗೊಂಡಿದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಮೇಲ್ವಿಚಾರಣಾ ಸಮಿತಿಯ ಸದಸ್ಯರಾದ ಗಣಪತಿ ಹಿರೇ ಭಟ್, ಸುಬ್ರಹ್ಮಣ್ಯ ಅಡಿ, ಪರಮೇಶ್ವರ ರಮಣಿ ಮತ್ತು ಮಹೇಶ ಹಿರೇಗಂಗೆ ಪಾಲ್ಗೊಂಡಿದ್ದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!