BREAKING NEWS
Search

ವರದಕ್ಷಿಣೆ ಕಿರುಕುಳ|ಸಿನಿಮಾ ನಟಿ ಅಭಿನಯಾಗೆ 2 ವರ್ಷ ಜೈಲು ಅಂದು ಆಗಿದ್ದೇನು? ವಿವರ ನೋಡಿ.

310

ಬೆಂಗಳೂರು: ಕನ್ನಡ ಸಿನಿಮಾ ಮತ್ತು ಕಿರುತೆರೆ ನಟಿ ಅಭಿನಯಾಗೆ ಹೈಕೋರ್ಟ್ ಏಕಸದಸ್ಯ ಪೀಠವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಎರಡು ವರ್ಚ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ 2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು.

ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಿಸಿದ್ದರು.

ಇದಲ್ಲದೇ ಲಕ್ಷ್ಮಿದೇವಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಲಾಗಿತ್ತು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು ಲಕ್ಷ್ಮೀದೇವಿ.

ಈ ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶಿಸಿದೆ.

ಪರಪುರುಷರ ಜೊತೆ ಸಹಕರಿಸಲು ಒತ್ತಾಯ ಮಾಡ್ದಿದ್ರು!

ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ನೋವನ್ನು ತೋಡಿಕೊಂಡಿದ್ದು ,ಅದೊಂದು ನರಕದ ಮನೆಯಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಇದಲ್ಲದೇ ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ ನರಕವನ್ನೂ ಅನುಭವಿಸಿದೆ. ತಿನ್ನೋಕೆ ಒಂದ್ ರೊಟ್ಟಿ, ಸ್ನಾನ ಮಾಡೋಕೆ ಒಂದ್ ಬಕೆಟ್ ನೀರು ಜೊತೆಗೆ ಪರಪುರುಷನ ಜೊತೆ ಸಹಕರಿಸು ಅಂತ ಚಿತ್ರಹಿಂಸೆ ಕೊಡುತ್ತಿದ್ದರು. ಪರಪುರುಷನನ್ನು ಮನೆಗೂ ಕರೆದುಕೊಂಡು ಬರುತ್ತಿದ್ದರು. ಅಭಿನಯ ಚಿತ್ರ ನಟಿಯಾದರೂ, ಅವರು ನನ್ನ ನೆರವಿಗೆ ಬರಲಿಲ್ಲ. ಅವರೂ ಕೂಡ ಹಿಂಸೆ ಕೊಟ್ಟರು ಎಂದು ಮಾತನಾಡಿದ್ದಾರೆ ಲಕ್ಷ್ಮಿದೇವಿ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!