BREAKING NEWS
Search

ಹಿಂದಿ ದಿವಸ್ ಆಚರಣೆಗೆ ವಿರೋಧ-ಕರವೇ ಯಿಂದ ಪ್ರತಿಭಟನೆ.

362

ಕಾರವಾರ’- ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡುತಿದ್ದು ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಕರವೇ ನಾರಾಯಣಗೌಡ ಬಣದ ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷ ಭಾಸ್ಕರ್ ಪಟಗಾರ್ ನೇತ್ರತ್ವದಲ್ಲಿ ಕಾರವಾರದ ಕೆನರಾ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ಅವರು ಕನ್ನಡಿಗರ ತೆರಿಗೆ ಹಣದಲ್ಲಿ ಸರ್ಕಾರ ಹಿಂದಿ ದಿವಸ್ ಆಚರಿಸುತ್ತಿದೆ ಇದು ಸರಿಯಲ್ಲ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆಧ್ಯತೆ ಕೊಡಬೇಕು.

ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಕೇಂದ್ರಸರ್ಕಾರದ ಇಲಾಖೆಗಳು,ಬ್ಯಾಂಕ್ ಗಳು ,ಸಾರ್ವಜನಿಕ ಉದ್ಯಮಗಳು ಕನ್ನಡದಲ್ಲೇ ಕಾರ್ಯನಿರ್ವಹಿಸಬೇಕು,
ಕನ್ನಡಿಗರಿಗೆ ಉದ್ಯೋಗ ನೀಡಬೇಕು,ಕನ್ನಡ ನುಡಿಯನ್ನು ಒಕ್ಕೂಟ ಸರ್ಕಾರದ ಆಡಳಿತ ಭಾಷೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾರವಾರ ತಾಲೂಕ ಅಧ್ಯಕ್ಷರು. ನರೇಂದ್ರ ತಲೇಕರ್. ಹೊನ್ನಾವರ ತಾಲೂಕ ಅಧ್ಯಕ್ಷ ಮಂಜುನಾಥಗೌಡ. ಹರೀಶ್ ಗೌಡ ಅಂಕೋಲಾ. ಬುದ್ಧಿವಂತ ನಾಯಕ್. ದತ್ತಾತ್ರೇಯ ಗೌಡ ಇತರೆ ಪದಾಧಿಕಾರಿಗಳು ಹಾಜರಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!