BREAKING NEWS
Search

ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ನೇತ್ರತ್ವದಲ್ಲಿ ಕದಂಬ ನೌಕಾನೆಯಲ್ಲಿ ಪ್ರತಿಭಟನೆ-ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಲು ಆಗ್ರಹ.

588

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಮತ್ತು ಗುತ್ತಿಗೆಯನ್ನ ನೀಡಬೇಕೆಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ್ ನೇತ್ರತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾರವಾರ ತಾಲೂಕಿನ ಸಂಕ್ರುಭಾಗ ಸಮೀಪದ ನೌಕಾನೆಲೆ ಗೇಟ್ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ನ್ಯಾಯ ನೀಡಬೇಕೆಂದು ಆಗ್ರಹಿಸಿದ್ರು.

ಈಗಾಗಲೇ ನೌಕಾನೆಲೆಗಾಗಿ ಸ್ಥಳೀಯರು ಭೂಮಿಯನ್ನ ಕಳೆದುಕೊಂಡಿದ್ದು, ಉದ್ಯೋಗ ನೀಡದೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಸ್ಥಳೀಯರಿಗೆ ಕೆಲಸ ನೀಡಬೇಕು. ಜೊತೆಗೆ ಹೊರ ಗುತ್ತಿಗೆ ಕಾಮಗಾರಿಯನ್ನ ಸ್ಥಳೀಯರಿಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಮತ್ತೆ ತೀವ್ರ ರೀತಿಯಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!