ರಮೇಶ್ ಜಾರಕಿಹೊಳಿ ಸೆಕ್ಸ್ ವೀಡಿಯೂ ವೈರಲ್:ಬೆಳಗಾವಿಯಲ್ಲಿ ಪವರ್ ಕಟ್!

9489

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕ ಚಟ ತೀರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೃತ್ಯಕ್ಕೆ ದೆಹಲಿಯ ಕರ್ನಾಟಕ ಭವನವನ್ನು ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದು, ಕಾಮದಾಟದ ವೀಡಿಯೋ ಇದೀಗ ವೈರಲ್ ಆಗಿದ್ದು ದೊಡ್ಡ ಸದ್ದು ಮಾಡುತ್ತಿದೆ.

ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಬಯಸಿದ್ದ ಯುವತಿ ಸಹಾಯಕ್ಕೆಂದು ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿದ್ದರು. ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡು ಜಾರಕಿಹೊಳಿ ಲೈಂಗಿಕ ತೃಷೆ ತೀರಿಸಿಕೊಂಡಿದ್ದಾರೆ ಎಂದು ದೂರುದಾರ ದಿನೇಶ್ ಕಲ್ಲಹಳ್ಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರಿನ ಜೊತೆ ಸಿಡಿ ನೀಡಿದ್ದಾರೆ.

ಸೆಕ್ಸ್ ಚಾಟ್ ಮಾಡಿದ ಸಾವುಕಾರ!

ದೆಹಲಿ ಕರ್ನಾಟಕ ಭವನ -೧ ರಿಂದ ಯುವತಿಗೆ ವೀಡಿಯೋ ಕಾಲ್ ಮಾಡಿ ಯುವತಿಯ ಬಟ್ಟೆ ಬಿಚ್ಚಿಸಿ ಸೆಕ್ಸ್ ಚಾಟ್ ಮಾಡಿದ್ದಾರೆ. ಈಗ ಈ ವೀಡಿಯೋ ಸಹ ವೈರಲ್ ಆಗಿದ್ದು ಕನ್ನಡವಾಣಿಗೆ ಲಭಿಸಿದೆ.

ನಾಳೆ ಮಧ್ಯಾಹ್ನ 2ಕ್ಕೆ ಸಿಎಂ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಗೆ ರಮೇಶ್ ಜಾರಕಿಹೊಳಿ ಬರ್ತಾರಾ ಎಂಬ ಪ್ರಶ್ನೆ ಇದೀಗ ಎದ್ದಿದೆ. ಸಂಪುಟ ಸಭೆಯಲ್ಲೂ ಸಾಹುಕಾರ್ ರಾಸಲೀಲೆಯದ್ದೇ ಚರ್ಚೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಸಂಪುಟ ಸಚಿವರು ಭಾರೀ ಮುಜುಗರಕ್ಕೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸಂಪುಟ ಸಚಿವರು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ರಾಸಲೀಲೆಗೆ ಇಡೀ ಬಜೆಟ್ ಅಧಿವೇಶನ ಬಲಿಯಾಗುತ್ತಾ ಎಂಬ ಪ್ರಶ್ನೆ ಇದೀಗ ಎದ್ದಿದ್ದು, ಮಾರ್ಚ್ 4 ರಿಂದ 31 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನ ನಡೆಯಲಿದೆ. ಪ್ರತಿಪಕ್ಷಗಳಿಗೂ ಇದೀಗ ಭರ್ಜರಿ ಅಸ್ತ್ರ ಸಿಕ್ಕಂತಾಗಿದೆ. ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರ ಕೆಡವಿದ ಸಿಟ್ಟಲ್ಲಿರುವ ಪ್ರತಿಪಕ್ಷಗಳು, ಈ ರಾಸಲೀಲೆ ಪ್ರಕರಣ ಇಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಪ್ಲಾನ್ ಮಾಡಿವೆ. ಹೀಗಾಗಿ ಬಜೆಟ್ ಅಧಿವೇಶನದಲ್ಲಿ ಈ ಸಿಡಿ ಪ್ರಕರಣ ದೊಡ್ಡ ಸದ್ದು ಮಾಡಲಿದೆ.

ಜಾರ್ಕಿಹೊಲಿ ಕ್ಷೇತ್ರದಲ್ಲಿ ಪವರ್ ಕಟ್ !

ರಮೇಶ್ ಜಾರಕಿಹೊಳಿ‌ ಸಿಡಿ ಬಿಡುಗಡೆ ಹಿನ್ನಲೆಯಲ್ಲಿ
ರಮೇಶ್ ಜಾರಕಿಹೊಳಿ‌ ಸ್ವಕ್ಷೇತ್ರ ಗೋಕಾಕ್ ನಲ್ಲಿ ವಿದ್ಯುತ್ ಕಟ್ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಾದ್ಯಂತ ಕಳೆದ ಇಪ್ಪತ್ತು ನಿಮಿಷಗಳಿಂದ ಕರೆಂಟ್ ಕಟ್ ಮಾಡಲಾಗಿದ್ದು ತಮ್ಮ ಕ್ಷೇತ್ರದ ಜನರು ವೀಡಿಯೋ ನೋಡದಂತೆ ತಡೆಯುವ ಪ್ರಯತ್ನ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

ದೂರು ದಾಖಲು.

ಅಧಿಕಾರ ದುರ್ಬಳಕೆ ಮಾಡಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಸರ್ಕಾರದ ಪ್ರಭಾವಿ ವ್ಯಕ್ತಿ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಾಗಿದೆ.

ದೂರು ನೀಡಿದ ಬಳಿಕ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ತನಗೂ ಕೂಡ ಜೀವ ಬೆದರಿಕೆ ಇದ್ದು ರಕ್ಷಣೆ ನೀಡಬೇಕು ಎಂದಿದ್ದಾರೆ.

ಇನ್ನು ಸಚಿವ ರಮೇಶ್‌ ಜಾರಕಿಹೊಳಿಯ ರಾಸಲೀಲೆಯ ವೀಡಿಯೊ ಚಿತ್ರೀಕರಣವನ್ನು ದೆಹಲಿಯ ಕರ್ನಾಟಕ ಭವನದಲ್ಲಿ ಚಿತ್ರೀಕರಿಸಲಾಗಿದೆ. ಸಚಿವರ ಈ ನಡತೆ ಕಂಡು ದೆಹಲಿ ಭವನದಿಂದ ಕೆಲ ಸಚಿವರು ಹೊರ ಹೋಗಿದ್ದರು ಎಂಬ ವಿಚಾರ ಈಗ ಲಭ್ಯವಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!