BREAKING NEWS
Search

ಕರೋನಾ ಗೆದ್ದವರಲ್ಲಿ ಕಾಡುತ್ತಿದೆ ಬ್ಲಾಕ್ ಫಂಗಸ್! ಎಚ್ಚರ ತಪ್ಪಿದರೆ ಆಪತ್ತು?ಏನಿದು! ವಿವರ ನೋಡಿ.

1473

ಬೆಂಗಳೂರು :- ಕರೋನಾ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಇದೀಗ ಬ್ಲಾಕ್ ಪಂಗಸ್ /ಮ್ಯುಕೋರ್‌ಮಯೋಸಿಸ್ ಕಾಡತೊಡಗಿದೆ.

ದೇಶದಲ್ಲಿ ಮೊದಲ ಬಾರಿಗೆ ದೆಹಲಿಯಲ್ಲಿ ಈ ಸೋಂಕಿನ ಲಕ್ಷಣವನ್ನು ಪತ್ತೆ ಮಾಡಲಾಗಿದೆ.
ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಜಿಲ್ಲೆಗಳಲ್ಲೂ ಸೋಂಕಿನಿಂದ ಗುಣಮುಖರಾದವರಲ್ಲಿ ಈ ಬ್ಲಾಕ್ ಪಂಗಸ್ ಕಾಡುತಿದ್ದು ಸ್ಪಲ್ಪ ಆಲಸ್ಯ ಮಾಡಿದರೂ ಜೀವಕ್ಕೆ ಕಂಠಕವಾಗಿದೆ.

ಕರೋನಾ ಎರಡನೇ ಅಲೆಯಲ್ಲಿ ಬೆಂಗಳೂರಿನಲ್ಲೂ ಡೆಡ್ಲಿ ಬ್ಲಾಕ್‌ ಫಂಗಸ್‌ ಇರುವ ರೋಗಿಗಳನ್ನು ಬೆಂಗಳೂರಿನ ಟ್ರಸ್ಟ್‌ ವೆಲ್‌ ಆಸ್ಪತ್ರೆಯಲ್ಲಿ 2 ವಾರದಲ್ಲಿ 38 ಸೊಂಕಿತರಿಗೆ ಚಿಕಿತ್ಸೆ ನೀಡಲಾಗಿದೆ.

ಕೋವಿಡ್‌ ನಿಂದ ಗುಣಮುಖರಾದ ಮಧುಮೇಹ ರೋಗಿಗಳಲ್ಲಿ ಹೆಚ್ಚಾಗಿ ಕಂಡುಬರುವ ಫಂಗಲ್‌ ಸೋಂಕು ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಕಣ್ಣು, ಮೇಲ್ಡವಡೆ ಕಳೆದುಕೊಳ್ಳುವ ಭೀತಿ ಜೊತೆ ಕೆಲವೊಮ್ಮೆ ಸಾವೂ ಸಂಭವಿಸಬಹುದಾಗಿದೆ ಎಂದು ತಜ್ಞ ವೈದ್ಯರು ಅಭಿಪ್ರಾಯ ಪಡುತ್ತಾರೆ.

ಬ್ಲಾಕ್ ಪಂಗಸ್ ಹೇಗೆ ಬರುತ್ತದೆ?

ಕರೋನಾ ಸೋಂಕಿಗೆ ಚಿಕಿತ್ಸೆ ನೀಡುವ ಸಂಧರ್ಭದಲ್ಲಿ ಸ್ಟಿರಾಯ್ಡ್‌ನ ಬಳಕೆ ಮಾಡಲಾಗುತ್ತಿದೆ. ಇದು ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ.

ಆದರೆ, ಹೆಚ್ಚು ಮಧುಮೇಹ ಹೊಂದಿರುವ ರೋಗಿಗಳಲ್ಲಿ ಸ್ಟಿರಾಯ್ಡ್‌ ಬಳಕೆಯಿಂದ ಸಕ್ಕರೆ ಅಂಶ ಹೆಚ್ಚಾಗುವುದರಿಂದ ಫಂಗಲ್‌ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೆಲವು ಸಂಧರ್ಭಗಳಲ್ಲಿ ಸ್ಟಿರಾಯ್ಡ್‌ ಹಾಗೂ ಹೆಚ್ಚು ಶಕ್ತಿಯ ಆಂಟಿಬಯಾಟಿಕ್‌ಗಳನ್ನು ನೀಡಲಾಗುತ್ತಿದೆ. ಇದರ ದುಷ್ಪರಿಣಾಮದಿಂದಾಗಿ ಕೆಲವು ರೋಗಿಗಳಲ್ಲಿ ರೋಗನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. ಆಗ, ಈ ಬ್ಲಾಕ್‌ ಫಂಗಸ್‌ ಅಥವಾ ಮ್ಯುಕೋರ್‌ಮಯೋಸಿಸ್ ಆಕ್ರಮಣ ಮಾಡಿ ಹಲವಾರು ತೊಂದರೆಗಳಿಗೆ ರೋಗಿಗಳನ್ನು ಸಿಲುಕಿಸುತ್ತದೆ.

ಬೆಂಗಳೂರಿನ ಟ್ರಸ್ಟ್‌ ವೆಲ್‌ ಆಸ್ಪತ್ರೆಯ ಮ್ಯುಕೋರ್‌ಮಯೋಸಿಸ್ ವಿಶೇಷ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿರುವ ಡಾ. ದೀಪಕ್‌ ಹಲ್ದೀಪುರ್‌ ಹೇಳುವಂತೆ ಕೋವಿಡ್‌ ಸಾಂಕ್ರಾಮಿಕ ರೋಗ ರೋಗಿಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತದೆ.

ಕರೋನಾ ಪ್ರಕರಣಗಳಲ್ಲಿ ಪ್ರಾಣ ಉಳಿಸುವ ಸ್ಟಿರಾಯ್ಡ್‌ಗಳನ್ನು ವೈದ್ಯರ ಸಲಹೆ ಇಲ್ಲದೆ ತಪ್ಪು ಬಳಕೆಯಿಂದ ಮಧುಮೇಹ ರೋಗಿಗಳಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ.

ಅಲ್ಲದೆ, ರೋಗ ನಿರೋಧಕ ಶಕ್ತಿಯನ್ನು ಕಡಿಮೆಗೊಳಿಸಿದ ಸಂಧರ್ಭದಲ್ಲಿ ಈ ಫಂಗಸ್‌ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತದೆ. ಆಕ್ಸಿಜನ್‌ ಹ್ಯೂಮಿಡಿಫೈರ್‌ ನಲ್ಲಿ ಬಳಸುವ ನೀರನ್ನು ಸ್ಟೆರಲೈಸ್‌ ಮಾಡದೇ ಇದ್ದ ಸಂಧರ್ಭದಲ್ಲೂ ಈ ಫಂಗಸ್‌ ರೋಗಿಗೆ ಬರುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ.

ಕೋವಿಡ್‌ ಸೋಂಕಿನಿಂದ ಗುಣುಮುಖರಾದ ಮೇಲೂ ಈ ಲಕ್ಷಣಗಳು ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ.

  1. ಮುಖದ ಒಂದೇ ಭಾಗದಲ್ಲಿ ನೋವು ಕಂಡುಬಂದರೆ.
  2. ಕಣ್ಣುಗಳಲ್ಲಿ ಊತ/ನೋವು ಕಂಡುಬಂದರೆ
  3. ಮೂಗಿನಲ್ಲಿ ಗಾಳಿಯಾಡದಿರುವಿಕೆ
  4. ಮೂಗಿನಲ್ಲಿ ರಕ್ತ ಸೋರಿಕೆ
  5. ಹಲ್ಲುಗಳು ಸಡಿಲಗೊಳ್ಳುವುದು
  6. ಬಾಯಿಯ ಮೇಲ್ಭಾಗದಲ್ಲಿ ಕಪ್ಪು ಅಥವಾ ಕಂದುಬಣ್ಣದ ಕಂಡುಬಂದರೆ
  7. ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಕಂಡುಬಂದರೆ
    ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಹಾಗೂ ಬ್ಯಾಕ್‌ ಫಂಗಸ್‌ ಅಥವಾ ಮ್ಯುಕೋರ್‌ಮಯೋಸಿಸ್ ನ ಸೋಂಕು ಇಲ್ಲದೇ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಖ್ಯಾತ ವೈದ್ಯರಾದ ದೀಫಕ್‌ ಹಲ್ದೀಪುರ್‌ ತಿಳಿಸಿದರು.

ಇನ್ನು ಡಾ ಹೆಚ್‌.ವಿ ಮಧುಸೂಧನ್‌ ರವರು ಹೇಳುವಂತೆ ಕಳೆದ ಎರಡು ವಾರದಲ್ಲಿ ಟ್ರಸ್ಟ್‌ ವೆಲ್‌ ಆಸ್ಪತ್ರೆಯಲ್ಲಿ 15 ಕ್ಕೂ ಹೆಚ್ಚು ಬ್ಯಾಕ್‌ ಫಂಗಸ್‌ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ.

ಇದೊಂದು ಸೈಲೆಂಟ್‌ ಕಿಲ್ಲರ್‌ ಸೋಂಕು ಆಗಿದ್ದು, ಕರೋನಾ ಮೊದಲ ಅಲೆಯಲ್ಲಿ ಕೇವಲ 33 ರೋಗಿಗಳಿಗೆ ಚಿಕಿತ್ಸೆ ನೀಡಿದ್ದೆವು. ಆದರೆ, ಈ ಬಾರಿ ಕೇವಲ 2 ವಾರದಲ್ಲಿ 38 ಜನರಿಗೆ ಸೋಂಕು ತಗುಲಿರುವುದು ಬಹಳ ಆತಂಕಕಾರಿ ವಿಷಯವಾಗಿದೆ. ಕರೋನ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದವರು ಅದರಲ್ಲೂ ಮಧುಮೇಹ ರೋಗದಿಂದ ಬಳುತ್ತಿರುವವರು ಬಹಳ ಹುಷಾರಾಗಿ ಇರಬೇಕು ಎಂದು ಅವರು ಸಲಹೆ ನೀಡಿದರು.

ಈ ಫಂಗಸ್‌ ಸೋಂಕು ಬಹು ಬೇಗ ಬೇರೆಯವರಿಗೆ ಹರಡುತ್ತದೆ. ಅದರಲ್ಲೂ ಇದಕ್ಕೆ ಚಿಕಿತ್ಸೆ ನೀಡುವ ವೈದ್ಯರಿಗೂ ಸೋಂಕಿನ ಭೀತಿ ತಪ್ಪಿದ್ದಲ್ಲ.

ಈ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸುವ ಅಗತ್ಯತೆ ಹೆಚ್ಚಾಗಿದೆ. ಮೇಲ್ಕಂಡ ಲಕ್ಷಣಗಳು ಕಂಡು ಬಂದಲ್ಲಿ ತಡಮಾಡದೇ ವೈದ್ಯರನ್ನು ಸಂಫರ್ಕಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಇದೀಗ ರಾಜ್ಯದಲ್ಲಿ ಕರೋನಾ ಗೆದ್ದವರಿಗೆ ಬ್ಲಾಕ್ ಪಂಗಸ್ ಕಾಟ ಶುರುವಾಗಿದೆ. ಯಾರಿಗೇ ಈ ಲಕ್ಷಣವಿದ್ದಲ್ಲಿ ತಪ್ಪದೇ ವೈದ್ಯರನ್ನು ಸಂಪರ್ಕಿಸಿ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!