ಕಾರವಾರ/ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ (Lok Sabha election )ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ದಿಸುವುದಿಲ್ಲ ಎಂದು ಹೇಳುತ್ತಲೇ ಇದ್ದ ಸಂಸದ ಅನಂತಕುಮಾರ್ ಹೆಗಡೆ ಪಕ್ಷದ ಮೇಲಿನ ಮುನಿಸು ಮುಂದುವರೆದಿದೆ.
ಹೀಗಾಗಿ ಭಾನುವಾರ ರಾತ್ರಿ ಫೈರ್ ಬ್ರಾಂಡ್ ಎನಿಸಿದ ಮೂರು ಬಿಜೆಪಿ ನಾಯಕರು ಹುಬ್ಬಳ್ಳಿಯಿಂದ ದೆಹಲಿಗೆ ಪಯಣಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.
ಸಂಸದ ಅನಂತ್ ಕುಮಾರ್ ಹೆಗ್ಡೆ (Anantkumar Hegde) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಇಬ್ಬರೂ ಜೊತೆಗೂಡಿ ಪಕ್ಷದ ವರಿಷ್ಟರ ಬುಲಾವ್ ನಿಂದ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್ಗಳು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ.
ಈ ಇಬ್ಬರು ನಾಯಕರ ಜೊತೆಗೆ ಸಂಸದ ಸಂಗಣ್ಣ ಕರಡಿ ಕೂಡ ಅದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಹೀಗಾಗಿ ಸಾಕಷ್ಟಿ ಕೂತೂಹಲ ಮೂಡಿಸಿದೆ .
ಬಿ.ಎಸ್ ಯಡಿಯೂರಪ್ಪ (BS Yediyurappa) ಅವರ ಮಗ ಬಿ.ವೈ ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿ (BJP) ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಯತ್ನಾಳ್ಗೆ ಸ್ವಪಕ್ಷ ವಿರುದ್ಧ ಇದ್ದ ಕೋಪ ಮತ್ತಷ್ಟು ಹೆಚ್ಚಾಗಿದೆ. ಈ ಸಂಬಂಧ ಕೆಲ ದಿನಗಳ ಹಿಂದೆ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ದೆಹಲಿಗೆ ಹೋಗ್ತೀನಿ. ದೆಹಲಿಯಿಂದ ಕರೆ ಬರಬೇಕಿದೆ, ಬರುತ್ತೆ. ಮಂಗಳವಾರ ಕೇಂದ್ರ ಕಚೇರಿಯಿಂದ ಸೂಚನೆ ಕೊಟ್ಟಿದ್ದಾರೆ. ಹೈಕಮಾಂಡ್ ಕರೆ ಬಂದ ಕೂಡಲೇ ದೆಹಲಿಗೆ ಹೋಗ್ತೀನಿ. ಅಲ್ಲಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎಂದಿದ್ದರು.
ಇದನ್ನೂ ಓದಿ:-Uttrakannada| ಲೋಕಸಭಾಗೆ ಸ್ಪರ್ಧೆ- ಅಂತರಾಳದ ಮಾತು ಬಹಿರಂಗ ಮಾಡಿದ ಕಾಗೇರಿ ಹೇಳಿದ್ದೇನು ಗೊತ್ತಾ?
ದೆಹಲಿಗೆ (Delhi) ಹೋಗಿ ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಹೇಳ್ತೀನಿ. ಇಬ್ಬರು ಮಹಾನುಭಾವರಿಂದ ರಾಜ್ಯ ಹಾಳಾಗಿದೆ. ಒಬ್ಬ ದೆಹಲಿಯವನು, ಇನ್ನೊಬ್ಬ ಕರ್ನಾಟಕದವನಿಂದ ರಾಜ್ಯ ಹಾಳಾಗಿದೆ. ಇಬ್ಬರು ಸಿಂಗ್ ಗಳು ಇದ್ದಾರೆ. ಅವರಿಂದ ರಾಜ್ಯ ಹಾಳಾಗಿದೆ, ಅದನ್ನೂ ಹೇಳ್ತೀನಿ ಎಂದು ತಿಳಿಸಿದ್ದರು.

ಇನ್ನು ಸಂಸದ ಅನಂತಕುಮಾರ್ ಹೆಗಡೆ ಸಹ ರಾಜ್ಯದ ನಾಯಕರ ವಿರುದ್ಧ ಅಸಮದಾನ ಗೊಂಡಿದ್ದರು. ಇನ್ನು ಪಕ್ಷದ ಕಾರ್ಯಚಟುವಟಿಕೆ ಯಲ್ಲಿ ಭಾಗಿಯಾಗದೇ ದೂರ ಉಳಿದಿದ್ದ ಸಂಸದರಿಗೆ ಪಕ್ಷದಿಂದ ಬುಲಾವ್ ಬಂದಿದೆ ಎನ್ನಲಾಗಿದ್ದು, ಇದರ ಜೊತೆ ಉತ್ತರ ಕನ್ನಡ ಜಿಲ್ಲೆಯಿಂದ ಪುನಹಾ ಸ್ಪರ್ಧಿಸಲು ಆರ್.ಎಸ್.ಎಸ್ ನಿಂದ ತೀವ್ರ ಒತ್ತಡ ಬಂದ ಹಿನ್ನಲೆಯಲ್ಲಿ ಕೇಂದ್ರದ ಪಕ್ಷದ ನಾಯಕರೊಂದಿಗೆ ಮಾತೂಕತೆ ನಡೆಸುವ ಸಾಧ್ಯತೆ ಇದ್ದು ಡಿಸೆಂಬರ್ ಅಂತ್ಯದ ವೇಳೆಗೆ ಸಂಸದ ಅನಂತಕುಮಾರ್ ಹೆಗಡೆ ಚುನಾವಣೆಗೆ ಸ್ಪರ್ಧಿಸುತ್ತಾರಾ ಅಥವಾ ಇಲ್ಲವೇ ಎಂಬುದು ಬಹಿರಂಗವಾಗುವ ಸಾಧ್ಯತೆಗಳಿವೆ.






