BREAKING NEWS
Search

ಕರ್ನಾಟಕದಲ್ಲಿ 4-11-2021 ರಿಂದ ಎಷ್ಟು ಪೆಟ್ರೋಲ್ ,ಡಿಸೇಲ್ ಎಷ್ಟು ಇಳಿಕೆ ಆಗಲಿದೆ. ಮುಖ್ಯಮಂತ್ರಿ ಹೇಳಿದ್ದೇನು?

1000

ಬೆಂಗಳೂರು:-ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂ. ಗಳಷ್ಟು ಕಡಿಮೆ ಮಾಡಿದೆ.
ಟ್ವೀಟ್ ಮೂಲಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಎಂದ ಅವರು ಜನರಿಗೆ ದೀಪಾವಳಿಯ ಉಡಗೊರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ.
ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ.
ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!