ಉತ್ತರ ಕನ್ನಡ ಜಿಲ್ಲೆಯ ಮುಖ್ಯಮಂತ್ರಿಗಳ ಕಾರ್ಯಕ್ರಮ ರದ್ದು|ಕಾರಣ ಏನು?

133

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ
ಬಿಜೆಪಿಯ ಜನಸಂಕಲ್ಪ ಯಾತ್ರೆಯು ಇದೇ ತಿಂಗಳ ಒಂಬತ್ತರಂದು ಹಳಿಯಾಳದಲ್ಲಿ ಜರುಗಬೇಕಿತ್ತು. ಆದರೇ ಈ ಕಾರ್ಯಕ್ರಮವನ್ನು ರದ್ದುಪಡಿಸಿ ಇದೇ ದಿನ ಬೆಳಗಾವಿಯಲ್ಲಿ ಜನಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಹಳಿಯಾಳದಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಯಾತ್ರೆ (Janasankalpa yathre) ಯನ್ನು ರದ್ದು ಪಡಿಸಲಾಗಿದೆ.

ರದ್ದಾಗಲು ಕಾರಣ ಏನು?

ಬಿಜೆಪಿ ಮೂಲದ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬರುತ್ತಿರುವ ಕಾರಣ ಸಮಯದ ಅಭಾವದಿಂದ ರದ್ದು ಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೇ ಮೂಲಗಳ ಪ್ರಕಾರ ಹಳಿಯಾಳದಲ್ಲಿ(Haliyala) ಕಬ್ಬು ಬೆಳಗಾರರ (farmer protest )ನಿರಂತರ ಪ್ರತಿಭಟನೆ ನಡೆಯುತಿದ್ದು ಜನಸಂಕಲ್ಪ ಯಾತ್ರೆಯನ್ನು ಆಯೋಜಿಸಿದಲ್ಲಿ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ (Karnataka Government )ಮುಖಭಂಗವಾಗುವ ಸಾಧ್ಯತೆ ಇದ್ದು ಹೀಗಾಗಿ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಕಾರ್ಯಕ್ರಮ ಎಲ್ಲೆಲ್ಲಿ ನಡೆಯಲಿದೆ. ವಿವರ ಈ ಕೆಳಗಿನಂತಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!