BREAKING NEWS
Search

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ|Jobs

105

ಬೆಂಗಳೂರು:- ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆಯಿಂದ ಖಾಲಿ ಇರುವ ಪ್ರೌಢಶಾಲೆಗಳ ಒಟ್ಟು 7,912 ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮಂಜೂರಾತಿ ನೀಡಿದೆ.

ಶಾಲಾ ಶಿಕ್ಷಣ ಇಲಾಖೆಯಿಂದ( education department) ಮೇ.25ರಂದು 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಿತ್ತು. ಈ ಬಳಿಕ 2000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲರು ಮಂಜೂರಾತಿ ನೀಡಿದೆ.

ಆಗಸ್ಟ್ 22ರಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ವೀಡಿಯೋ ಸಂವಾದದಲ್ಲಿ ಪಡೆದ ಮಾಹಿತಿಯಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 7,912 ಹುದ್ದೆಗಳು ಖಾಲಿ ಇದ್ದು, ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವವರೆಗೂ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅನುಮತಿಸಲಾಗಿದೆ. ಇದನ್ನೂ ಓದಿ:-ಗಂಗಾವಳಿ ನದಿಯಲ್ಲಿ ಬೃಹದಾಕಾರದ ಮೊಸಳೆ ಪ್ರತ್ಯಕ್ಷ !

ಅತಿಥಿ ಶಿಕ್ಷಕರ ನೇಮಕಾತಿಗೆ ಕೆಲವು ಷರತ್ತು ವಿಧಿಸಿದ್ದು, ತಾಲೂಕಿನಲ್ಲಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ ಖಾಲಿ ಹುದ್ದೆಗಳಿಗೆ ಹಾಗೂ ವರ್ಗಾವಣೆ ನಂತ್ರ ಕಡಿಮೆ ಶಿಕ್ಷಕರು ಕಾರ್ಯ ನಿರ್ವಹಿಸುವ ಶಾಲೆಗಳಿಗೆ ಮಾತ್ರವೇ ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚಿಸಲಾಗಿದೆ.

ಇನ್ನೂ ಚುನಾಯಿತ ಪ್ರತಿನಿಧಿ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರನ್ನು ಅತಿಥಿ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳುವಂತಿಲ್ಲ. ನೇಮಕಾತಿಗಾಗಿ ಮಂಜೂರಾತಿ ನೀಡಿರುವ ಅತಿಥಿ ಶಿಕ್ಷಕರನ್ನು ಸಂಬಂಧಿಸಿದ ತಾಲೂಕಿನೊಳಗೆ ಕಡ್ಡಾಯವಾಗಿ ಆದ್ಯತೆ ಮೇರೆಗೆ ಬಳಸಿಕೊಳ್ಳುವಂತೆ ಹೇಳಿದೆ.

ಒಂದು ವೇಳೆ ಶಿಕ್ಷಕರ ವರ್ಗಾವಣೆಯಿಂದ ಭರ್ತಿಯಾಗಿದ್ದಲ್ಲಿ, ತಕ್ಷಣ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಬೇಕು. ತಾಲೂಕುವಾರು ಮರು ಹೊಂದಾಣಿಕೆ ಮಾಡಿರುವಂತೆ 7,912 ಅತಿಥಿ ಶಿಕ್ಷಕರನ್ನು ಶಿಕ್ಷಕರ ಕೊರತೆ ನೀಗಿಸಲು ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ತಿಳಿಸಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!