ಬೆಂಗಳೂರು:- ಆಯವ್ಯಯ 2023-24 ರ ಬಜೆಟ್ ನಲ್ಲಿ ಕರಾವಳಿ (2023-2024 karnataka government budget )ಮೀನಿಗಾರರಿಗೆ ಇಂದಿನ ಸರ್ಕಾರ ಒಂದಿಷ್ಟು ಯೋಜನೆಗಳನ್ನು ಮಾರ್ಪಾಡು ಮಾಡಿದ್ದು ಏನೆಲ್ಲಾ ನೀಡಲಾಗಿದೆ ಅದರ ಹೈಲೆಟ್ಸ್ ಈ ಕೆಂಳಗಿನಂತಿದೆ.
1.ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.
2. ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ₹250 ಕೋಟಿ ಗಳಷ್ಟು ಸರ್ಕಾರದಿಂದ ನೆರವು ಸಿಗಲಿದೆ.
ಮಳೆಗೆ ಕರಾವಳಿಯ ಇಬ್ಬರು ಸಾವು.ವಿವರ ನೋಡಲು ಫೋಟೋದ ಮೇಲೆ ಕ್ಲಿಕ್ ಮಾಡಿ.

- ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.
- ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು.
- ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.
5.ಮೀನುಗಾರಿಕೆಗೆ ಈಗ ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಲಭ್ಯವಿರುವ ಶೈತ್ಯಾಗಾರಗಳನ್ನು ಹೆಚ್ಚಿಸಲು ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.






