ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರು ಬಳಸುವ ಅಸುರಕ್ಷಿತ ಹಾಫ್ ಹೆಲ್ಮೆಟ್‌ಗಳ (ಅರ್ಧ ಹೆಲ್ಮೆಟ್) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಹಾಫ್ ಹೆಲ್ಮೆಟ್‌ಗಳು ಸವಾರರ ತಲೆಗೆ ಅಗತ್ಯ ಸುರಕ್ಷತೆ ಒದಗಿಸುವುದಿಲ್ಲ ಎಂಬ ಹಿನ್ನೆಲೆಯಲ್ಲಿ, ಇವುಗಳ ಉತ್ಪಾದನೆ ಹಾಗೂ ತಯಾರಿಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಇದನ್ನೂ ಓದಿ:-Karnataka | ಬೆಂಗಳೂರಿಗೆ ಬಂದ ಶಾಸಕರು ಎರಡೆರೆಡು ಮದುವೆ ಆಗಿದ್ದಾರೆ ಅದರ ಹಿಸ್ಟರಿ ನನ್ನಬಳಿ ಇದೆ-ಡಿಕೆ ಸ್ಪೋಟಕ ಹೇಳಿಕೆ
ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ನೇತೃತ್ವದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಉಲ್ಲಂಘನೆಗೆ ವಿಧಿಸುವ ದಂಡ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಭೆ ನಡೆಯಿತು.
ಸಭೆಯ ಬಳಿಕ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್, ಶೀಘ್ರದಲ್ಲೇ ಈ ಕುರಿತು ನಿಯಮ ರೂಪಿಸಲಾಗುವುದು. ಹಾಫ್ ಹೆಲ್ಮೆಟ್ ತಯಾರಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ಗಳ ತಯಾರಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹಾಫ್ ಹೆಲ್ಮೆಟ್ ಬಳಕೆಗೆ ಕಡಿವಾಣ
ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಪೂರೈಸುವ ಹೆಲ್ಮೆಟ್‌ಗಳ ಬಳಕೆಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.
