Weather| ರಾಜ್ಯದ ಹಲವುಕಡೆ ನಾಲ್ಕು ದಿನ ಮಳೆ ಸೂಚನೆ

Weather:-ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಸಿಡಿಲು, ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
UttraKannada weather forecast daily report Karnataka UttraKannada weather forecast daily report Karnataka
Weather forecast UTTARAKANNADA

Weather| ರಾಜ್ಯದ ಹಲವುಕಡೆ ನಾಲ್ಕು ದಿನ ಮಳೆ ಸೂಚನೆ

 

Weather news:-ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲು ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Advertisement

Karnataka ಜನತೆಗೆ ವಿದ್ಯುತ್ ಶಾಕ್- ದರದಲ್ಲಿ ಏರಿಕೆ

ಇಂದು ಕರ್ನಾಟಕದ (karnataka) ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ (rain)ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗದಗ, ಕೊಪ್ಪಳ, ಬೆಳಗಾವಿ, ಧಾರವಾಡ, ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಈಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಭಾಗದ ಶಿವಮೊಗ್ಗ ,ಚಿಕಮಗಳೂರು ಜಿಲ್ಲೆಯಲ್ಲೂ ಗಾಳಿ ಸಹಿತ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಕೂಡ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಹವಾಮಾನ ತಜ್ಞರ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ನೈರುತ್ಯ ಮುಂಗಾರು ಪ್ರವೇಶಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಈ ವರ್ಷದ ಪೂರ್ವ ಮುಂಗಾರು ಮಳೆಯು ಉತ್ತಮವಾಗಿ ಆಗುತ್ತಿದ್ದು, ಜಲಾಶಯಗಳ ನೀರಿನ ಮಟ್ಟ ಏರಿಕೆಗೆ ಇದು ನೆರವಾಗಲಿದೆ. ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಜನತೆಗೆ ಈ ಮಳೆ ತಂಪೆರೆದರೂ, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ರೈತರು ಬೆಳೆದ ಕೃಷಿ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಎದುರಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement