ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ|ರಾಘವೇಶ್ವರ ಶ್ರೀ ,ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚಾರ್ಜಶೀಟ್ ವಜಾ ಗೊಳಿಸಿದ ಹೈಕೋರ್ಟ್.

137

ಬೆಂಗಳೂರು: 2014, ಸೆಪ್ಟೆಂಬರ್ 1ರಂದು ತಮ್ಮಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪುತ್ತೂರಿನ ತಮ್ಮ ಮನೆಯಲ್ಲಿ ಆತ್ಮ ಹತ್ಯೆ ಮಾಡಿಕೊಂಡು ದೊಡ್ಡ ಸದ್ದು ಮಾಡಿದ್ದ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ (Suicide case) ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಲ್ಲಿಸಲಾಗಿದ್ದ ಚಾರ್ಜ್‌ಶೀಟನ್ನು ರಾಜ್ಯ ಹೈಕೋರ್ಟ್‌ ರದ್ದುಪಡಿಸಿದೆ.( High Court)

ಶ್ಯಾಮ್ ಪ್ರಸಾದ್ ಶಾಸ್ತ್ರಿ ಅವರು ರಾಘವೇಶ್ವರ ಶ್ರೀಗಳು ನಡೆಸುತ್ತಿದ್ದ ರಾಮಕಥಾದ ಗಾಯಕಿಯಾಗಿದ್ದ ಪ್ರೇಮಲತಾ ದಿವಾಕರ್ ಶಾಸ್ತ್ರಿ ರವರ ಪತಿಯ ಸಹೋದರನಾಗಿದ್ದರು.

ರಾಮಕಥಾ ಗಾಯಕಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಶ್ರೀಗಳು ಆರೋಪಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಪತಿಯ ಸಹೋದರರಾಗಿರುವ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದರು ಎಂಬ ಆರೋಪಕ್ಕೆರಾಘವೇಶ್ವರ ಶ್ರೀಗಳು ಮತ್ತು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ನೀಡಲಾಗಿತ್ತು.

ರಾಮಕಥಾ ಗಾಯಕಿಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪ ಎದುರಿಸುತ್ತಿದ್ದ ರಾಘವೇಶ್ವರ ಸ್ವಾಮೀಜಿ ಪರ ವಹಿಸುವಂತೆ ಶ್ಯಾಮ್ ಪ್ರಸಾದ್ ಶಾಸ್ತ್ರಿ ಮೇಲೆ ಒತ್ತಡ ಹೇರಲಾಗಿತ್ತು ಎನ್ನುವ ಆರೋಪ ಈ ಇಬ್ಬರ ಮೇಲೆ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಸಿಐಡಿ ಶ್ರೀಗಳು ಹಾಗೂ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಿಐಡಿ ತನಿಖಾಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.

ಈ ಆರೋಪ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಘವೇಶ್ವರ ಶ್ರೀಗಳು ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿ ಚಾರ್ಜ್‌ಶೀಟ್‌ ರದ್ದುಪಡಿಸಿದೆ.

ಆತ್ಮಹತ್ಯೆ ಪ್ರಚೋದನೆಗೆ ಸಾಕ್ಷ್ಯಾಧಾರ ಇಲ್ಲ

ರಾಘವೇಶ್ವರ ಶ್ರೀ (Ragaveshvara shri) ಅವರನ್ನು ಪ್ರತಿನಿಧಿಸಿದ್ದ ವಕೀಲ ಪಿ ಎನ್ ಮನಮೋಹನ್ ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಪಿ ಪಿ ಹೆಗ್ಡೆ ಅವರು ಅರ್ಜಿದಾರರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಾಧಾರ ಇಲ್ಲ,ಶಾಮ್ ಪ್ರಸಾದ್ ಶಾಸ್ತ್ರಿಹತಾಶರಾಗಿ ಆತ್ಮಹತ್ಯೆಗೆ ಶರಣಾದಂತಿದೆ. ಅವರು ಬರೆದಿಟ್ಟಿದ್ದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರುಗಳ ಉಲ್ಲೇಖವೇ ಇಲ್ಲ. ಅಂತೆಯೇ, ತನಿಖಾಧಿಕಾರಿಗಳು ಶಾಮ್ ಪ್ರಸಾದ್ ಶಾಸ್ತ್ರಿ ಮೃತಪಟ್ಟ ಒಂದು ತಿಂಗಳ ನಂತರ ಸುಳ್ಳು ಹೇಳಿಕೆ ತಯಾರಿಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದ್ದರು.

ಏನಿದು ಘಟನೆ?

ರಾಮಕಥಾ ಗಾಯಕಿಯ ಪತಿ ದಿವಾಕರ ಶಾಸ್ತ್ರಿ ಅವರ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ 2014, ಸೆಪ್ಟೆಂಬರ್ 1ರಂದು ತಮ್ಮಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂದ್ದರು. ಇದಲ್ಲದೇ ಆತ್ಮಹತ್ಯೆಗೂ ಮುನ್ನ ಪತ್ರ ಸಹ ಬರೆದಿಟ್ಟಿದ್ದರು.

ಸಂಧ್ಯಾಲಕ್ಷ್ಮಿ ಯಿಂದ ದೂರು

ರಾಘವೇಶ್ವರ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಹೇಳಬೇಕು. ನೀವು ಸ್ವಾಮೀಜಿ ಪರ ನಿಲ್ಲಬೇಕು ಎಂದು ಸ್ವಾಮೀಜಿ ಕಡೆಯವರು ದೂರವಾಣಿ ಮೂಲಕ ಒತ್ತಡ ಹಾಕಿದ್ದರು ಮತ್ತು ಈ ಒತ್ತಡ ಹೇರುವ ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರರು ಇದ್ದರು ಎಂದು ಆರೋಪಿಸಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಅವರ ಪತ್ನಿ ಸಂಧ್ಯಾಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದಸಿಐಡಿ ನ್ಯಾಯಾಲಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.

mangaluru #gokarna #Ragaveshvarashri #case #karnataka
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!