BREAKING NEWS
Search

ಉದ್ಯೋಗ|ಇತರೆ ಅವಕಾಶಗಳ ಮಾಹಿತಿ.

688

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ.

ಬೆಂಗಳೂರು:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಿಂದ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗೆ 45 ದಿನಗಳ ತರಬೇತಿ ನೀಡಲಾಗುತ್ತಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಸಕ್ತರು ಫೆ. 10 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

GoodNews|ನೇರ ನೇಮಕಾತಿ ಹುದ್ದೆಗಳಿಗೆ ಗ್ರೀನ್ ಸಿಗ್ನಲ್.

ದಿನಾಂಕ 06-07-2020ರಂದು ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ಹಿಡಿಯಲಾಗಿತ್ತು. ಆದ್ರೇ ಇದೀಗ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡಿದ್ದು, ಕೆಲವು ಇಲಾಖೆಗಳಿಗೆ ನೇಮಕಾತಿಗಾಗಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ(ಆ&ಸಂ) ಡಾ.ಏಕ್ ರೂಪ್ ಕೌರ್, ದಿನಾಂಕ 06-07-2020ರಲ್ಲಿ ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೂಢೀಕರಿಸಲು 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು.

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡುವಂತೆ ಕೋರಿ ಹಲವಾರು ಇಲಾಖೆಗಳಿಂದ ಪ್ರಸ್ತಾವನೆಗಳನ್ನು ಸ್ವೀಕೃತಗೊಂಡ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಕೆಲವು ಇಲಾಖೆಗಳಿಗೆ ಸಹಮತಿ ನೀಡಲಾಗಿದೆ.

ಮುಂದುವರೆದು ದಿನಾಂಕ 12-01-2021ರ ಸುತ್ತೋಲೆಯಲ್ಲಿ ಅನುಕಂಪನದ ಆಧಾರದ ಮೇಲೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ಕೆಲವು ಷರತ್ತುಗಳಿಗೆ ಒಳಪಟ್ಟು ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗಿದೆ.

ಇದೇ ರೀತಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಆದೇಶ ನೀಡಲು ಅನುಮತಿ ಕೋರಿರುವ ವಿವಿಧ ಇಲಾಖೆಗಳಿಂದ ಪ್ರಸ್ತಾವನೆಗಳು ಸ್ವೀಕೃತಗೊಂಡಿರುತ್ತವೆ.

ಈ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಸಹಮತಿ ನೀಡಿದೆ.

ಮುಂದುವರೆದು, ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಕ್ತಾಯಗೊಂಡ ನಂತರ, ಆರ್ಥಿಕ ಇಲಾಖೆಯ ಗಮನಕ್ಕೆ ತಂದು ಅಭ್ಯರ್ಥಿಗಳಿಗೆ ದಿನಾಂಕ 01-06-2021ರ ನಂತರ ನೇಮಕಾತಿ ಆದೇಶ ನೀಡಲು ಸಹ ಸಹಮತಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ವಸತಿ ನಿಲಯಗಳ ಪ್ರವೇಶಾತಿಗೆ ಫೆ.7 ರವೆರೆಗೆ ಕಾಲಾವಕಾಶ

ಕಾರವಾರ :- 2020-21ನೇ ಸಾಲಿಗೆ ನವೀಕರಣಗೊಂಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶ ಪಡೆಯುವ ವಿವಿಧ ಕೋರ್ಸ್‍ಗಳ ವಿದ್ಯಾರ್ಥಿಗಳ ಪ್ರವೇಶಾತಿಗೆ ಫೆ. 7 ರವೆರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿರೇಂದ್ರ ಎನ್. ಬಾಡಕರ್ ಹೇಳಿದ್ದಾರೆ.

2019-20ನೇ ಸಾಲಿನಲ್ಲಿ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ಇಂಜಿನೀಯರಿಂಗ್ ಮತ್ತು ವೈದ್ಯಕೀಯ, ದ್ವಿತೀಯ ವರ್ಷದ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಒಳಗೊಂಡಂತೆ ವಿವಿಧ ಕೋರ್ಸ್‍ಗಳಲ್ಲಿ ಇಲಾಖಾ ವಸತಿ ನಿಲಯಗಳಲ್ಲಿ ಅಭ್ಯಸಿಸಿದ ನವೀಕರಣಗೊಂಡ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶ ಪಡೆದಿದ್ದು, ಬಾಕಿಯುಳಿದ ಅರ್ಹ ವಿದ್ಯಾರ್ಥಿಗಳ ಪ್ರವೇಶಾತಿಗೆ ಫೆ. 7ರ ವೆರೆಗೆ ಅಂತಿಮ ಕಾಲಾವಕಾಶವಿದೆ.

ನವೀಕರಣ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ಸೂಚಿಸಿದ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಪ್ರವೇಶ ಪಡೆಯಬಹುದು.

ನಿಗದಿತ ಕಾಲಮಿತಿ ನಂತರ ಪ್ರವೇಶ ಪಡೆಯಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226589ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:-

https://kannadavani.news/karnataka-government-order-covid-19-the-government-that-allowed-a-large-number-of-people-to-come-to-the-marriage-home/ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!