Karnataka| ಲೋಕಲ್ ನ್ಯೂಸ್ -ಎಲ್ಲಿ ಏನಾಗಿದೆ ಇಂದು?ಫಟಾಫಟ್ ಸುದ್ದಿ ಇಲ್ಲಿದೆ.
ಕರ್ನಾಟಕದ(Karnataka) ಪ್ರಮುಳ ವಿದ್ಯಮಾನಗಳ ಕಿರು ಪಕ್ಷಿನೋಟದ ಸುದ್ದಿಗಳು ಇಲ್ಲಿವೆ.ಒಂದೇ ಲಿಂಕ್ ನಲ್ಲಿ ರಾಜ್ಯ ಜಾಗೂ ದೇಶದ ಪ್ರಮುಖ ವಿದ್ಯಮಾನಗಳ ಫಟಾ ಪಟ್ ಸುದ್ದಿ ಓದಿ.
ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಆಧುನೀಕರಣಗೊಳಿಸಲು ಗ್ರೀನ್ ಸಿಗ್ನಲ್

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು 4,997 ಕೋಟಿ ರೂ. ವೆಚ್ಚದಲ್ಲಿ PPP ಮಾದರಿಯಲ್ಲಿ ಮರುಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಏಕ ಗವಾಕ್ಷಿ ಸಂಸ್ಥೆಯು ಈ ಬೃಹತ್ ಯೋಜನೆಗೆ ಅಂತಿಮ ಅನುಮೋದನೆಗಾಗಿ CM ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಒಟ್ಟು 12,936.86 ಕೋಟಿ ರೂ. ಮೌಲ್ಯದ ಏಳು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಾಗಿದೆ.
ಇದನ್ನೂ ಓದಿ:-ನ್ಯಾಷನಲ್ ನ್ಯೂಸ್| ದೇಶದ ಪ್ರಮುಖ ವಿದ್ಯಮಾನಗಳ ಪಕ್ಷಿನೋಟ
ಬೆಂಗಳೂರು ಹೋಟೆಲ್ ಮಾಲೀಕರಿಂದ ‘ಸ್ವಿಗ್ಗಿ’ಗೆ ಶಾಕ್.

ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆ ಸ್ವಿಗ್ಗಿಗೆ ಬೆಂಗಳೂರಿನಲ್ಲಿ ಸಂಕಷ್ಟ ಎದುರಾಗಿದೆ. ಅನಗತ್ಯ ಕಮಿಷನ್, ಪಾವತಿಗಳಲ್ಲಿ ಪಾರದರ್ಶಕತೆಯ ಕೊರತೆ & ಅನುಮತಿಯಿಲ್ಲದೆ ಹಣ ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಸೇರಿದಂತೆ ವಿವಿಧ ಹೋಟೆಲ್ ಮಾಲೀಕರ ಸಂಘಟನೆಗಳು ಆ. 15ರಿಂದ ಸ್ವಿಗ್ಗಿ ಮೂಲಕ ಆರ್ಡರ್ ಸ್ವೀಕರಿಸುವುದನ್ನು ಸ್ಥಗಿತಗೊಳಿಸಲು ತೀರ್ಮಾನಿಸಿವೆ. ಕಳೆದ 10 ತಿಂಗಳಿನಿಂದ ಮಾತುಕತೆ ನಡೆಸಿದರೂ ಸಮಸ್ಯೆಗೆ ಸೂಕ್ತ ಪರಿಹಾರ ಸಿಗದ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಂಬಿಕಾನಗರ – ದಾಂಡೇಲಿ ರಸ್ತೆಯಲ್ಲಿ ಧರೆಗುರುಳಿದ ಮರ : ಸಂಚಾರ ಅಸ್ತವ್ಯಸ್ತ.

ದಾಂಡೇಲಿ : ಅಬ್ಬರದ ಗಾಳಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬಿಕಾನಗರ – ದಾಂಡೇಲಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ.
ಇದನ್ನೂ ಓದಿ:-Dandeli| ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಹೊಡೆದಾಟ ಕೊನೆಗೂ ಸಿಕ್ಕರು ಕುಡುಕ ಕುಚುಕುಗಳು!
ವ್ಯಾಪಕವಾಗಿ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ಮರ ಧರೆಗುರುಳಿದೆ. ಇಡೀ ರಸ್ತೆಗೆ ಮರ ಬಿದ್ದಿರುವ ಹಿನ್ನೆಲೆಯಲ್ಲಿ ರಕ್ತ ಸಂಚಾರ ಅಸ್ತವ್ಯಸ್ತಗೊಂಡಿದ್ದು ಇದೀಗ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.
ಕಾವೇರಿ ಕಿಚ್ಚು-ನಟ ವಿಜಯ್ ಸಿನಿಮಾ ಪ್ರದರ್ಶನ ರದ್ದು.
ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರೈತರ ಪ್ರತಿಭಟನೆಗಳು ಜೋರಾಗಿದೆ. ಇದೀಗ, ರೈತ ಸಂಘಟನೆಗಳ ಮುತ್ತಿಗೆ ಎಚ್ಚರಿಕೆಗೆ ಅಂಜಿದ ಚಾಮರಾಜನಗರದ ಶ್ರೀ ಬಸವೇಶ್ವರ ಚಿತ್ರಮಂದಿರದ ಮಾಲೀಕರು, ತಮಿಳುನಾಡು ಸಿಎಂ ಹಾಗೂ ನಟ ವಿಜಯ್ ಅಭಿನಯದ ‘ಜನನಾಯಗನ್’ ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಸದ್ಯ ಥಿಯೇಟರ್ ಸಿಬ್ಬಂದಿಗಳು ಬ್ಯಾನರ್-ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ತಮಿಳುನಾಡು ಸಿಎಂ ವಿಜಯ್ ಕರ್ನಾಟಕ ಪ್ರವಾಸ ನಿರ್ಧಾರವಾಗಿಲ್ಲ

ಕಾವೇರಿ ವಿವಾದದ ನಡುವೆ ತಮಿಳುನಾಡು CM ಜೋಸೆಫ್ ವಿಜಯ್ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಚರ್ಚೆ ಬಗ್ಗೆ ತಮಿಳುನಾಡು ಸಚಿವರೊಬ್ಬರು ಸ್ಪಷ್ಟನೆ ನೀಡಿದ್ದಾರೆ. ಆ. 3ರಂದು ತಮಿಳುನಾಡು CM ವಿಜಯ್ ಬೆಂಗಳೂರಿಗೆ ಬರುತ್ತಾರೆ ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಇಂಧನ ಸಚಿವ C.T.R ನಿರ್ಮಲ್‌ಕುಮಾರ್, CM ಭೇಟಿ ಕುರಿತು ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸೂಕ್ತ ಸಮಯದಲ್ಲಿ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ.
ಆ.13ಕ್ಕೆ ‘ಕರ್ನಾಟಕ ಬಂದ್’-ವಾಟಾಳ್ ನಾಗಾರಜ್ ಘೋಷಣೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಆಕ್ರೋಶ ಮುಗಿಲು ಮುಟ್ಟಿದ್ದು, ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬೃಹತ್ ಹೋರಾಟಕ್ಕೆ ಕರೆ ನೀಡಿವೆ. ಇಂದು ನಡೆದ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಕಾವೇರಿ ಜಲವಿವಾದದ ಕುರಿತು ಸುದೀರ್ಘ ಚರ್ಚಿಸಲಾಗಿದೆ. ಬಳಿಕ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಆ. 13 ರಂದು ‘ಕರ್ನಾಟಕ ಬಂದ್’ ನಡೆಸಲು ಅಧಿಕೃತವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕರ್ನಾಟಕ ಬಂದ್‌ಗೆ ಕರವೇ ನಾರಾಯಣ ಗೌಡರ ಬೆಂಬಲ ಇಲ್ಲ.

ಕಾವೇರಿ ವಿವಾದ ಬೆನ್ನಲೇ ಆ. 13ರಂದು ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ವಿವಿಧ ಸಂಘಟನೆಗಳು ಘೋಷಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಕರವೇ ನಾರಾಯಣ ಗೌಡ, ಈ ಬಂದ್‌ಗೆ ಕರವೇ ಬೆಂಬಲ ಇಲ್ಲ. ಬಂದ್‌ನಲ್ಲಿ ಭಾಗವಹಿಸುವುದಿಲ್ಲ. ನಮ್ಮ ಕೂಗು ದೆಹಲಿಯ ದೊರೆಗಳಿಗೆ ಮುಟ್ಟಬೇಕು. ಬಂದ್ ಬದಲಾಗಿ ದೆಹಲಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗೆ ಸಿದ್ಧತೆ ಮಾಡಬೇಕಿದೆ. ಕಾವೇರಿ ನಷ್ಟ ಆಗಿದೆ. ಬಂದ್ ಮಾಡಿದರೆ, ನಮ್ಮ ಜನಕ್ಕೆ ನಷ್ಟ. ದೆಹಲಿ ಪ್ರತಿಭಟನೆ ದಿನಾಂಕ ಶೀಘ್ರದಲ್ಲೇ ಘೋಷಿಸುವುದಾಗಿ ಹೇಳಿದ್ದಾರೆ.
ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆ ರಾಜ್ಯ ಸರ್ಕಾರ ಮಹತ್ವದ ಆದೇಶ.

ರಾಜ್ಯದ ನಗರ ಆರೋಗ್ಯ ಸೇವೆಗಳಲ್ಲಿ ಪ್ರಮುಖ ಬದಲಾವಣೆ ತರಲು ಹಾಗೂ ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ ಸಂಸ್ಥೆಗಳ (NGO) ಸಹಕಾರದೊಂದಿಗೆ ನಡೆಸಲ್ಪಡುತ್ತಿದ್ದ ‘ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು’ ಸಂಪೂರ್ಣವಾಗಿ ರದ್ದುಗೊಳಿಸಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇಂದು ಅಪರಾಹ್ನದಿಂದಲೇ ಜಾರಿಗೆ ಬರುವಂತೆ ಈ ಕೇಂದ್ರಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.
BJP ರಾಷ್ಟ್ರೀಯ ವಕ್ತಾರ ದಿಢೀರ್ ರಾಜೀನಾಮೆ

BJP ಪಕ್ಷಕ್ಕೆ ಪ್ರಮುಖ ಮುಖಂಡ ಶಾಕ್ ನೀಡಿದ್ದಾರೆ.BJP ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ BJPಯ ಪ್ರಾಥಮಿಕ ಸದಸ್ಯತ್ವಕ್ಕೆ ಧಿಡೀರ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷದ ಉನ್ನತ ನಾಯಕತ್ವಕ್ಕೆ ಶೆಹಜಾದ್ ಪೂನಾವಾಲಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜೀನಾಮೆಗೆ ನಿಖರ ಕಾರಣಗಳು ಇನ್ನೂ ಹೊರಬಿದ್ದಿಲ್ಲವಾದರೂ, ಸದ್ಯದಲ್ಲೇ ಮಾಧ್ಯಮಗಳ ಮುಂದೆ ಬಂದು ಪೂನಾವಾಲಾ ಅಧಿಕೃತ ಹೇಳಿಕೆ ನೀಡುವ ಸಾಧ್ಯತೆಯಿದೆ.
ನಾಳೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ- IMD ಸೂಚನೆ

ನಾಳೆ ದಕ್ಷಿಣಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ & ಶಿವಮೊಗ್ಗ, ಚಿಕ್ಕಮಗಳೂರು, ಹಾಸನ & ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ & ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು IMD ಸೂಚಿಸಿದೆ.
