UttraKannada weather forecast weekly report Karnataka

ಮಿಂಚಾಂಗ್ ಚಂಡಮಾರುತ: ಕರ್ನಾಟಕದ ಹಲವು ಕಡೆ ಮಳೆ ಎಲ್ಲೆಲ್ಲಿ ಮಳೆ ವಿವರ ನೋಡಿ.

246

ಬೆಂಗಳೂರು:- ಮಿಚಾಂಗ್ ಚಂಡಮಾರುತದ (cyclone )ರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುವ (rain) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚಾಂಗ್ ಚಂಡಮಾರುತ (michang cyclone)
ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮಳೆಯಾಗುವ (rain) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಿಚಾಂಗ್ ಚಂಡಮಾರುತ ದಿಂದ ರಾಜಧಾನಿ ಬೆಂಗಳೂರಿನಲ್ಲಿ (Bangalore) ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣ ಮಳೆ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂಓದಿ:- ಡಿಸೆಂಬರ್‌ ತಿಂಗಳ ಈವದಿನದ ರಾಶಿಫಲ ತಿಳಿಯಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.

ಡಿಸೆಂಬರ್‌ ( December )6ರ ಬುಧವಾರ ವಾದ ಇಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಮಾತ್ರ ಒಣ ಹವೆಯ ವಾತಾವರಣ ಮುಂದುವರೆಯಲಿದೆ.

ಡಿಸೆಂಬರ್‌ 8ರ ಶುಕ್ರವಾರದಂದು ಕರ್ನಾಟಕ(Karnataka state) ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ . ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.

ಡಿಸೆಂಬರ್‌ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ.

ಇನ್ನು ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಡಿಸೆಂಬರ್‌ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ (uttrakannada) ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!