ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆಗೆ ಕರಾಟೆ ತರಬೇತಿ-ಕೋಟ ಶ್ರೀನಿವಾಸ ಪೂಜಾರಿ.

741

ಕಾರವಾರ :- ಮೆಟ್ರಿಕ್ ನಂತರದ ಮಕ್ಕಳಿಗೆ ಆತ್ಮರಕ್ಷಣೆಗಾಗಿ ರಾಜ್ಯದ ವಸತಿ ಶಾಲೆಗಳು ಮತ್ತು ಹಾಸ್ಟೆಲ್ ಗಳ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲಾಗುತ್ತದೆ ಎಂದು ಹಿಂದುಳಿದ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇಂದು ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾತನಾಡಿದ ಅವರು ಓಬವ್ವ ಆತ್ಮರಕ್ಷಣೆ ಕಲೆ ಹೆಸರಲ್ಲಿ ಕರಾಟೆ ಕಲಿಕೆಗೆ ವ್ಯವಸ್ಥೆ ಮಾಡಲಾಗಿದೆ.ದೈಹಿಕವಾಗಿ ವಿದ್ಯಾರ್ಥಿನಿಯರಿಗೆ ಆತ್ಮಸ್ಥೈರ್ಯ ಮತ್ತು ಸ್ವಯಂರಕ್ಷಣೆ ಈ ಶಿಕ್ಷಣ ಅಗತ್ಯವಾಗಿದೆ.ರಾಜ್ಯದ 1702 ಶಿಕ್ಷಣ ಸಂಸ್ಥೆಗಳಲ್ಲಿ.
182000 ವಿದ್ಯಾರ್ಥಿನಿಯರಿಗೆ ಕರಾಟೆ ಶಿಕ್ಷಣ ನೀಡಲಾಗುತ್ತದೆ. ಇದಕ್ಕಾಗಿ ತರಬೇತುದಾರರಾಗಿ ಬ್ಲ್ಯಾಕ್ ಬೆಲ್ಟ್ ಪಡೆದ ಮಹಿಳೆಯರಿಂದ ತರಬೇತಿ ನೀಡಲಾಗುತ್ತದೆ‌. ಫೆಬ್ರವರಿ 7 ರಂದು ಮುಖ್ಯಮಂತ್ರಿಗಳಿಂದ ಓಬವ್ವ ಆತ್ಮರಕ್ಷಣೆ ಕಲೆ ಉದ್ಘಾಟನೆ ಮಾಡುತ್ತಾರೆ ಎಂದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!