ರಾಜ್ಯಾಧ್ಯಾಂತ ಹೊಸವರ್ಷಾಚರಣೆಗೆ ನಿರ್ಬಂಧ ಹೇಗಿದೆ ನಿಯಮ ವಿವರ ನೋಡಿ.

1319

ಬೆಂಗಳೂರು:- ರಾಜ್ಯಾಧ್ಯಾಂತ ಹೊಸವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಸಿ.ಎಂ ಬೊಮ್ಮಾಯಿ ನೇತ್ರತ್ವದಲ್ಲಿ ಸಭೆ ನಡೆಸಿ ಈ ಕುರಿತು ಮಾಧ್ಯಮಗಳೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿರವರು ಮಾಹಿತಿ ನೀಡಿದ್ದು,ಇದರಂತೆ ಗುಂಪಾಗಿ ಹೊಸ ವರ್ಷದ ಸಂಭ್ರಮಕ್ಕೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ನಿರ್ಬಂಧ ಹೇರಲಾಗಿದ್ದು ,ಡಿಜೆ ಬ್ಯಾನ್ ಮಾಡಲಾಗಿದೆ. ಎಂಜಿ ರೋಡ್ ಬ್ರಿಗೇಡ್ ರೋಡ್ ಮಾದರಿಯಂತೆ ಬಹಿರಂಗ ಹೊಸ ವರ್ಷ ಆಚರಣೆಗೆ ನಿಷೇಧವಿದ್ದು ಪಬ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ 50% ಅವಕಾಶ ನೀಡಲಾಗಿದೆ.ಇನ್ನು ಹೋಟಲ್ ,ಪಬ್ ಸೇರಿದಂತೆ ಹೆಚ್ಚು ಜನ ಸೇರುವ ಪ್ರದೇಶದಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಇನ್ನು ಕ್ರಿಸ್ ಮಸ್ ಆಚರಣೆಗೆ ಯಾವುದೇ ನಿರ್ಬಂದ ವಿರುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿರವರು ತಿಳಿಸಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!