ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಹೇಗಿದ್ದಾರೆ?

127

ಬೆಂಗಳೂರು: ಮಂಗಳವಾರ ತಡರಾತ್ರಿ ಉಸಿರಾಟದ ಸಮಸ್ಯೆ ,ಜ್ವರ ಕಾಣಿಸಿಕೊಂಡು ಹಿನ್ನಲೆಯಲ್ಲಿ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲಾಗಿದ್ದಾರೆ.

ಇದೀಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರ ಆರೋಗ್ಯದ ಕುರಿತು ವೈದ್ಯರು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದಾರೆ.

ಸದ್ಯ ಮಾಜಿ ಸಿಎಂ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಾಳೆ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ, ಇನ್ನೂ ಎರಡ್ಮೂರು ದಿನ ಆಸ್ಪತ್ರೆಯಲ್ಲಿರಬೇಕಾಗುತ್ತೆ ಎಂದು ಚಿಕಿತ್ಸೆ ನೀಡುತಿದ್ದ ಡಾ. ಸತೀಶ್ ಚಂದ್ರ ಹೇಳಿದ್ದಾರೆ.

ಕುಮಾರಸ್ವಾಮಿಯವರ ಎಡಭಾಗದಲ್ಲಿ ರಕ್ತನಾಳ (Blood Vessel) ಸಮಸ್ಯೆಯಾಗಿದೆ .ಎಡಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಹೀಗಾಗಿ ಅವರ ಮಾತು ತೊದಲುತ್ತಿತ್ತು, ತುಂಬಾ ಸುಸ್ತಾಗಿದ್ದರು. ಅಡ್ಮಿಟ್ ಆದ ಒಂದು ಗಂಟೆಯಲ್ಲೇ ಆರೋಗ್ಯವಾಗಿದ್ದಾರೆ. ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ನಾಳೆ ಬೆಳಗ್ಗೆ ಮತ್ತೊಂದು ಹೇಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಈ ರೀತಿ ಸಮಸ್ಯೆಯಾದ ಮೂರು ಗಂಟೆಗಳಲ್ಲಿ ಆಸ್ಪತ್ರೆಗೆ ಬಂದಾಗ ಬೇಗ ಚೇತರಿಕೆ ಕಾಣಬಹುದು. ಮಾಜಿ ಮುಖ್ಯಮಂತ್ರಿಗಳು ಬೆಳಗ್ಗೆ 3.45 ಕ್ಕೆ ಆಸ್ಪತ್ರೆಗೆ ಬಂದಿದ್ದರು. ಅವರು ಮಾತನಾಡಲು ಕಷ್ಟಪಡುತ್ತಿದ್ದರು. ಎಡಭಾಗದ ರಕ್ತನಾಳ ಸಮಸ್ಯೆಯಿಂದ ಈ ರೀತಿಯಾಗಿತ್ತು. ಕೂಡಲೇ ಅವರಿಗೆ ಚಿಕಿತ್ಸೆ ಪ್ರಾರಂಭ ಮಾಡಿದ್ದೆವು. ಚಿಕಿತ್ಸೆ ನೀಡಲು ಶುರು ಮಾಡಿದ 1 ಗಂಟೆಯಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸದ್ಯ ಆರೋಗ್ಯ ಚೇತರಿಕೆ ಕಾಣುತ್ತಿರುವುದರಿಂದ ಅಭಿಮಾನಿಗಳು ಭಯ ಪಡೋದು ಬೇಡ. ಏನೂ ಆಗೊಲ್ಲ ಎಂದು ಅನಿತಾ ಕುಮಾರಸ್ವಾಮಿ(Anitha kumarswami) ರವರು ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!