ಮೋದಿ ಬೆಂಬಲಿಸುವ ಹಲವರು ಆಕಾಂಕ್ಷಿತರು ಜಿಲ್ಲೆಯಲ್ಲಿ ಇದ್ದಾರೆ ಎಂದ ಕಾಗೇರಿ! ಅನಂತಕುಮಾರ್ ಹೆಗಡೆ ಸ್ಪರ್ಧಿಸುವುದಿಲ್ಲವೇ?

104

ಕಾರವಾರ :- ಬಿಜೆಪಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಮಾತು ಕೇಳಿಬರುತಿದ್ದಂತೆ ಪಕ್ಷದ ಹಲವು ನಾಯಕರು ಹೆಗಡೆ ಸ್ಪರ್ಧಿಸದಿದ್ರೆ ತಾವೂ ಕೂಡ ಆಕಾಂಕ್ಷಿ ಎಂದು

ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಆದ್ರೆ ಇತ್ತೀಚೆಗೆ ವಿಧಾನಸಭಾ ಚುನಾವಣೆಯಲ್ಲಿ ಶಿರಸಿಯಿಂದ ಸ್ಪರ್ದಿಸಿ ಸೋತಿದ್ದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆಯವರು ಸಹ ಮುಂದಿನ ಲೋಕಸಭಾ ಅಭ್ಯರ್ಥಿ ಎಂಬ ಸುದ್ದಿ ಹಬ್ಬುತ್ತಿರುವಾಗಲೇ ಪತ್ರಿಕಾ ಗೋಷ್ಠಿ ನಡೆಸಿದ ಕಾಗೇರಿಯವರು ,ಉತ್ತರ ಕನ್ನಡ ಜಿಲ್ಲೆಗೆ ಸಂಸದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರು ಮತ್ತೆ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿ ಆಗಲಿದ್ದಾರೆ, ಅಂತಿಮವಾಗಿ ಹೈಕಮಾಂಡ್‌ ಹಾಗೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ ಯಾರೇ ನಿಂತರು ಗೆಲ್ಲಿಸಿ ತರುತ್ತೇವೆ ಎಂದು ಮಾಜಿ ಸ್ಪೀಕರ್ ಬಿಜೆಪಿ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಇಂದು ಶಿರಸಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರಕಾರದ ಕೆಲಸಗಳ ಆಧಾರದಲ್ಲಿಯೇ ಮತ ಯಾಚನೆ ಮಾಡುತ್ತೆವೆ. ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂದು ಅವರನ್ನು ಬೆಂಬಲಿಸಿ ಹಲವರು ಆಕಾಂಕ್ಷಿತರು ಜಿಲ್ಲೆಯಲ್ಲಿ ಇದ್ದಾರೆ. ಪಕ್ಷದ ವರಿಷ್ಠರು ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲುವಿಗಾಗಿ ಕೆಲಸ ಮಾಡುತ್ತೇವೆ ಎಂದು ಹಾಲಿ ಸಂಸದ ಅನಂತಕುಮಾರ್ ಹೆಗಡೆ ಈಬಾರಿ ಸ್ಪರ್ದೆ ಮಾಡುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪುಷ್ಟಿ ನೀಡುವಂತೆ ಕೆಲವು ತಿಂಗಳ ಹಿಂದೆ ಸಂಸದರ ಬೆಂಬಲಿಗರನ್ನ ಪಕ್ಷದ ಪ್ರಮುಖ ಹುದ್ದೆಯಿಂದ ತೆಗೆದುಹಾಕಲಾಗಿದ್ದು ಇದೀಗ ಕಾಗೇರಿಯವರು ಸಹ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವುದು ಇದಕ್ಕೆ ಪುಷ್ಟಿ ನೀಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!