ಬೆಂಗಳೂರು:- ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (CM Siddaramaiah )ವರನ್ನು ಯಲ್ಲಾಪುರ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಮನವಿ ಸಲ್ಲಿಸಿದರು.
ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದಲ್ಲಿ ವಾಡಿಕೆಗಿಂತ 70 % ಪ್ರತಿಶತ ಮಳೆಯ ಪ್ರಮಾಣ ಕಡಿಮೆಯಾಗಿದ್ದು ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ರೈತರ ಹಿತದೃಷ್ಟಿಯಿಂದ ಯಲ್ಲಾಪುರ ವಿಧಾನ ಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನವನ್ನು ಮಂಜೂರಿಸುವಂತೆ ಲಿಖಿತ ರೂಪದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಗೆ ಸೇರ್ಪಡೆಗೊಳ್ತಾರಾ ಹೆಬ್ಬಾರ್!
ಈ ಹಿಂದೆ ಕಾಂಗ್ರೆಸ್ ಗೆ ಶಿವರಾಮ್ ಹೆಬ್ಬಾರ್ ಸೇರ್ಪಡೆಗೊಳ್ತಾರೆ ಎಂಬ ಸುದ್ದಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಆದರೇ ತಾವು ಬಿಜೆಪಿಯಲ್ಲೇ ಇದ್ದೀನಿ ಕ್ಷೇತ್ರದಲ್ಲಿ ಪಕ್ಷದ ಪದಾಧಿಕಾರಿಗಳ ಮೇಲೆ ಅಸಮಧಾನವಿದೆ,ಪಕ್ಷದ ವರಿಷ್ಟರಿಗೆ ದೂರು ನೀಡಿದ್ದೇನೆ ಅವರು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದಿದ್ದರು.
ಇದರ ಪೂರಕವಾಗಿ ಪಕ್ಷದಲ್ಲೂ ಸಹ ಹಲವು ಪಧಾದಿಕಾರಿಗಳಿಗೆ ಕೋಕ್ ನೀಡಲಾಗಿತ್ತು. ಆದ್ರೆ ಇದೀಗ ಮುಖ್ಯಮಂತ್ರಿಗಳನ್ನ ಭೇಟಿಯಾಗಿರುವ ಹೆಬ್ಬಾರ್ ತಾವು ಪಕ್ಷಕ್ಕೆ ಸೇರ್ಪಡೆ ವಿಚಾರ ಕುರಿತು ಸಹ ಮಾತೂಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಈವರೆಗೂ ಯಾವಾಗ ಸೇರ್ಪಡೆ ಗೊಳ್ತಾರೇ,ಅಥವಾ ಸದ್ಯದ ಮಟ್ಟಿಗೆ ಪಕ್ಷದಲ್ಲೇ ಮುಂದುವರೆಯಲಿದ್ದಾರಾ ಎಂಬುದನ್ನು ಕಾದುನೋಡಬೇಕಿದೆ. ಒಟ್ಟಿನಲ್ಲಿ ಇಂದು ಕೂಡ ಬೆಂಗಳೂರಿನಲ್ಲಿ ಇರುವ ಹೆಬ್ಬಾರ್ ಸಂಜೆ ವೇಳೆಯಲ್ಲಿ ಕ್ಷೇತ್ರಕ್ಕೆ ಮರಳುವ ಸಾಧ್ಯತೆಗಳಿವೆ.
ಇದನ್ನೂ ಓದಿ:- 26-08-2023 ರ ದಿನ ಭವಿಷ್ಯ ನೋಡಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.