Karnataka Rain report

Rain news: ಕರಾವಳಿಯಲ್ಲಿ ಮುಂದುವರೆಯಲಿದೆ ಮಳೆ ಇಂದು ಎಲ್ಲೆಲ್ಲಿ ಎಷ್ಟು ಮಳೆ ವಿವರ ನೋಡಿ

181

ಬೆಂಗಳೂರು:- ರಾಜ್ಯದಲ್ಲಿ ಇನ್ನೂ ಸಹ ಮಳೆ ( rain news) ಮುಂದುವರೆಯಲಿದ್ದು ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.

ಉತ್ತರ ಕನ್ನಡ ಜಿಲ್ಲೆ ಮಳೆ ವರದಿ:-

ಕಳೆದ 24 ಘಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು ಸೆ.26 ರ ರಾತ್ರಿಯಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗಲಿದೆ. ಸೆ‌27 ರಿಂದ ಜಿಲ್ಲೆಯಾಧ್ಯಾಂತ ಚಿಟಿ ಚಿಟಿ ಮಳೆ ಇರಲಿದ್ದು ಘಟ್ಟ ಭಾಗದಲ್ಲಿ ಉತ್ತಮ ಮಳೆ ನಿರೀಕ್ಷೆಇದೆ.

ಜಲಾಶಯದ ನೀರಿನ ಮಟ್ಟ( water level)




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!