BREAKING NEWS
Search

ದ್ವಿತೀಯ PUC ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ| ವಿವರ ನೋಡಿ.

170

ಬೆಂಗಳೂರು: ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Karnataka Second PUC Annual Examination 2023 ) ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ( Karnataka School Examination and Evaluation Board ) ಪ್ರಕಟಿಸಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ದಿನಾಂಕ 09-03-2023 ರಿಂದ ದಿನಾಂಕ 29-03-2023ರವೆಗೆ ನಡೆಯಲಿದೆ.

ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ದ್ವಿತೀಯ PUC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ವಿವರ:-

ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್,ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ,ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
ದಿನಾಂಕ 21-03-2023, ಮಂಗಳವಾರ – ಹಿಂದಿ
ದಿನಾಂಕ 23-03-2023, ಗುರುವಾರ – ಇಂಗ್ಲೀಷ್
ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!