SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ ನಿರ್ದೇಶನ

Karnataka High Court directs the state to award marks instead of grades for SSLC third language subjects including Hindi. The order applies from the 2025–26 academic year.
Karnataka High Court orders marks instead of grades for SSLC third language subjects including Hindi under KSEAB exams Karnataka High Court orders marks instead of grades for SSLC third language subjects including Hindi under KSEAB exams
Karnataka High Court orders

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ ನಿರ್ದೇಶನ 

 

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್‌ಎಸ್‌ಎಲ್‌ಸಿ (SSLC)ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Advertisement

Election:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆ -ರಾಜ್ಯಪಾಲರ ಅಂಕಿತ

ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿದಂತೆ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕಗಳನ್ನು ನೀಡಬೇಕು ಎಂದು ಪೂರ್ವದಲ್ಲೇ ಮಾರ್ಗಸೂಚಿಗಳು ಮತ್ತು ಸುತ್ತೋಲೆಗಳು ಜಾರಿಯಾಗಿದ್ದವು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅದರಂತೆ ಲಿಖಿತ ಪರೀಕ್ಷೆಗೆ 80 ಅಂಕ ಮತ್ತು ಆಂತರಿಕ ಮೌಲ್ಯಮಾಪನಕ್ಕೆ 20 ಅಂಕ ನೀಡಬೇಕೆಂದು ಸೂಚಿಸಲಾಗಿತ್ತು. ಆದರೆ ಪರೀಕ್ಷೆ ನಡೆಯುವ ಅಂತಿಮ ಹಂತದಲ್ಲಿ ಸರ್ಕಾರ ಅಂಕಗಳ ಬದಲು ಗ್ರೇಡ್ ನೀಡುವ ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿಗಳಿಗೆ ಗೊಂದಲ ಉಂಟುಮಾಡಿದೆ ಎಂದು ಅವರು ಆಕ್ಷೇಪಿಸಿದರು.

ಇದನ್ನೂ ಓದಿ:-Karwar|ಆನ್‌ಲೈನ್ ಹೂಡಿಕೆ ಮೋಸ: ನಿವೃತ್ತ ನೌಕರರಿಂದ ₹21.76 ಲಕ್ಷ ವಂಚನೆ

ಇದಲ್ಲದೆ, ಯುಪಿಎಸ್‌ಸಿ (UPSC)ಹಾಗೂ ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗ್ರೇಡ್‌ಗಳನ್ನು ಪರಿಗಣಿಸಲಾಗುವುದಿಲ್ಲ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಹೀಗಾಗಿ ತೃತೀಯ ಭಾಷಾ ವಿಷಯಗಳಲ್ಲಿ ಗ್ರೇಡ್ ಪದ್ಧತಿ ಜಾರಿಯಾದರೆ ರಾಜ್ಯದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ವಾದಿಸಿದರು.

ಈ ಕುರಿತು ನ್ಯಾಯಾಲಯ ಸರ್ಕಾರದ ನಿಲುವು ಕೇಳಿದಾಗ, ಸರ್ಕಾರಿ ವಕೀಲರು ಗ್ರೇಡ್ ಪದ್ಧತಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಮಾತ್ರ ಹೊರಡಿಸಲಾಗಿದೆ ಎಂದು ತಿಳಿಸಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ಈಗಿರುವ ನಿಯಮಗಳು ಮತ್ತು ಮಾರ್ಗಸೂಚಿಗಳನ್ನೇ ಅನುಸರಿಸಿ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ (sslc)ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಮತ್ತು ಕೆಎಸ್‌ಇಎಬಿಗೆ (KSEAB)ಸೂಚನೆ ನೀಡಿತು. ನಂತರ ಅರ್ಜಿಯನ್ನು ಇತ್ಯರ್ಥಪಡಿಸಲಾಯಿತು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement