ಬಗರ್ ಹುಕುಂ ಆ್ಯಪ್‌ ಬಿಡುಗಡೆ|ಏನಿದು ಆ್ಯಪ್‌? ಹೇಗೆ ಕೆಲಸ ಮಾಡುತ್ತದೆ? ವಿವರ ನೋಡಿ.

ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ
krishnabairegawda krishnabairegawda

Bangaluru :-ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌(aap) ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಆ್ಯಪ್‌ ಬಿಡುಗಡೆ ಮಾಡಿದರು.

ಬರ್ ಹುಕುಂ ಆ್ಯಪ್‌ ನಲ್ಲಿ ಏನಿದೆ?

Advertisement

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.

ಇದನ್ನೂ ಓದಲು ಪ್ಲೋಟೋದ ಮೇಲೆ ಕ್ಲಿಕ್ ಮಾಡಿ:

ananthkumar hegde

ಆ್ಯಪ್ ಹೇಗೆ ಕೆಲಸ ಮಾಡುತ್ತೆ?

ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್‌ಗೆ ಕಳುಹಿಸುತ್ತಾರೆ. ಇದರ ಸಹಾಯದಿಂದ ತಹಶೀಲ್ದಾರ್‌ ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರ ಎಂಬ ಮಾಹಿತಿ ಕಲೆಹಾಕುತ್ತಾರೆ. ಅಲ್ಲದೆ ಆ ಇಮೇಜ್ ಜೊತೆಗೆ ಎಲ್ಲಾ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ ಓಟಿಪಿ ಮೂಲಕ ಕೆವೈಸಿ ಮಾಡುವ ಮೂಲಕ ಋಜುವಾತು ಮಾಡುತ್ತಾರೆ.

ಈ ಮೂಲಕ ಅಕ್ರಮ ಸಕ್ರಮ ಆಗುವುದಲ್ಲದೇ ಅಧಿಕಾರಿಗಳ ಕೆಲಸವೂ ಸುಲಭವಾಗಲಿದ್ದು ಭೂ ದಾರರಿಗೂ ಸಹಾಯ ಆಗಲಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement