ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರೌಢಶಾಲೆಯ 9ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಮೊದಲ ದಿನವಾದ ಇಂದು ಉತ್ತಮ ಸ್ಪಂದನೆ ದೊರೆತಿದ್ದು ಮೊದಲ ದಿನ ವಿದ್ಯಾರ್ಥಿಗಳು ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜುರಾಗಿದ್ದಾರೆ. ಶಿಕ್ಷಕರು ಕೂಡ ಹೆಚ್ಚು ಮುತುವರ್ಜಿ ವಹಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರೆ ಕೆಲವು ಶಾಲೆಗಳಲ್ಲಿ ತಳಿರು ತೋರಣದ ಮೂಲಕ ವಿದ್ಯಾರ್ಥಿಗಳಿಗೆ ಸ್ವಾಗತ ನೀಡಿದರು.


ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಪ್ರೌಢಶಾಲೆ ವಿದ್ಯಾರ್ಥಿಗಳ ಮೊದಲ ದಿನದ ಹಾಜುರಾತಿ ವಿವರ
ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಹಾಜುರಾದ ವಿದ್ಯಾರ್ಥಿಗಳ ಅಂಕಿ ಅಂಶ ವಿವರ:-
ಶಿರಸಿ- 65%
ಸಿದ್ದಾಪುರ- 80%
ಯಲ್ಲಾಪುರ- 66%
ಮುಂಡಗೋಡು-50%
ಹಳಿಯಾಳ-68%
ಜೋಯಿಡಾ- 60%
ಒಟ್ಟು ತಾಲೂಕು ಹಾಜುರಾತಿ – 65%
ಕಾರವಾರ ಶೈಕ್ಷಣಿಕ ಜಿಲ್ಲೆ ಯಲ್ಲಿ ಒಟ್ಟು ಹಾಜುರಾದ ಪ್ರೌಢಶಾಲಾ ವಿದ್ಯಾರ್ಥಿಗಳ ಅಂಕಿ ಅಂಶಗಳ ವಿವರ.
ಕಾರವಾರ;63%
ಅಂಕೋಲಾ;69%
ಕುಮಟಾ;76%
ಹೊನ್ನಾವರ;71%
ಭಟ್ಕಳ;67%
ಒಟ್ಟು ತಾಲೂಕು ಸರಾಸರಿ- 74%
ಶಾಲೆಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ.
ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಕಾಳಮ್ಮನಗರದ ಸರಕಾರಿ ಪ್ರೌಢಶಾಲಾ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು, ವಿದ್ಯಾರ್ಥಿಗಳಿಗೆ ಸುರಕ್ಷತೆಗಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪ್ರೋತ್ಸಾಹ ನೀಡಿದರು.
ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿಸುವಂತೆ ಸೂಚಿಸಿದರು, ಸರ್ಕಾರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಲ್ಲಾ ರೀತಿಯ ಸುರಕ್ಷಾ ಕ್ರಮವನ್ನು ತೆಗೆದುಕೊಂಡಿದೆ ಯಾವುದೇ ಆತಂಕ ಇಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ಮನವಿಮಾಡಿದರು .