ಹವಾಮಾನ ವರದಿ|ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ-ಎಲ್ಲಿ ಹೇಗೆ ವಿವರ ನೋಡಿ.

58

ಬೆಂಗಳೂರು:- ಆಗಸ್ಟ್ ತಿಂಗಳ ಮೊದಲ ವಾರದಿಂದ ಮಳೆಯ (Rain)ಪ್ರಮಾಣ ಸಂಪೂರ್ಣ ಇಳಿಕೆ ಕಂಡಿತ್ತು.ಅದ್ರೆ ಹವಾಮಾನ ಇಲಾಖೆ ಆಗಸ್ಟ್ 14 ರ ವರೆಗೂ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸೂಚನೆಯನ್ನು ನೀಡಿದೆ. ಹಾಗಿದ್ರೆ ಎಲ್ಲಿ ಹೆಚ್ಚು ಮಳೆಯಾಗಲಿದೆ ವಿವರ ಈ ಕೆಳಗಿನಂತಿದೆ.


ಇದನ್ನೂ ಓದಿ:-Kumta|800 ವಿದ್ಯಾರ್ಥಿಗಳೊಂದಿಗೆ 100 ಮೀಟರ್ ಉದ್ದದ ತಿರಂಗ ಮೆರವಣಿಗೆ.

ಹವಾಮಾನ ಇಲಾಖೆ ಪ್ರಕಾರ ಮುಂದಿನ ಒಂದು ವಾರಗಳ ಕಾಲ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಕಲಬುರಗಿ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಗದಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.

ಇದನ್ನೂ ಓದಿ:-ಕಾರವಾರ|ಕುಡುಕರ ಹಾವಳಿಗೆ ಪೊಲೀಸರೇ ಸುಸ್ತು!

ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಪ್ರಮಾಣ( coastal Karnatak) ಕಡಿಮೆಯಾಗಿದ್ದು ನದಿಗಳ ಅಬ್ಬರ ಕಡಿಮೆಯಾಗಿದೆ. ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗುತ್ತಿದೆ.

ಯಾದಗಿರಿ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಮಂಡ್ಯ, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:-ರೈತರ ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!