BREAKING NEWS
Search

Load shedding :ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ :ಗ್ರಾಮೀಣ, ನಗರ ಪ್ರದೇಶಗಳಲ್ಲಿ ಪವರ್ ಕಟ್ ಶಾಕ್!

97

ಬೆಂಗಳೂರು:-ಉಚಿತ ಕರೆಂಟ್ ಸಿಗುತ್ತೆ ಎಂದು ರಾಜ್ಯದ ಜನ ಖುಷಿ ಪಡುವ ಹೊತ್ತಲ್ಲೇ ರಾಜ್ಯ ಸರ್ಕಾರ ಸದ್ದಿಲ್ಲದೇ ಪವರ್ ಕಟ್ ಶಾಕ್ ನೀಡಿದೆ. ರಾಜ್ಯದಲ್ಲಿ ಸದ್ಯ ವಿದ್ಯುತ್ ಅಭಾವ (Power Shortage) ತೀವ್ರಗೊಂಡಿದೆ. ಹೀಗಾಗಿ ಅನಧಿಕೃತ ಲೋಡ್ ಶಡ್ಡಿಂಗ್ ಜಾರಿಯಾಗಿದೆ.

ವಿದ್ಯುತ್ ಅಭಾವದ ನಡುವೆಯೂ ಎಲ್ಲಾ ಎಸ್ಕಾಂಗಳು ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದ್ದು ಕೃಷಿಕರನ್ನು ಸಂಪೂರ್ಣ ಕಡೆಗಣಿಸಿದೆ. ಗ್ರಾಮೀಣ ಭಾಗ ಮಾತ್ರವಲ್ಲದೇ ನಗರ ಪ್ರದೇಶಗಳಲ್ಲಿಯೂ ಲೋಡ್‌ಶೆಡ್ಡಿಂಗ್ ಶಾಕ್ ನೀಡುತ್ತಿದೆ.

ಈಗಾಗಲೇ ತೀವ್ರ ವಿದ್ಯುತ್ ಸಮಸ್ಯೆ ಇರುವುದನ್ನು ಇಂಧನ ಇಲಾಖೆ (Energy Department) ಒಪ್ಪಿಕೊಂಡಿದ್ದು, ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬಹಿರಂಗಮಾಡಿದೆ.

ಮುಂಗಾರು ಕೊರತೆಯಿಂದ ತೀವ್ರ ವಿದ್ಯುತ್ ಸಮಸ್ಯೆಯಾಗಿದ್ದು ಪವನ ವಿದ್ಯುತ್, ಸೋಲಾರ್, ಜಲ ವಿದ್ಯುತ್, ಉಷ್ಣಸ್ಥಾವರಗಳಲ್ಲಿ ಉತ್ಪಾದನೆ ಕುಂಠಿತವಾಗಿದೆ. ಪ್ರಸ್ತುತ ನಿತ್ಯ 15 ಸಾವಿರ ಮೆಗಾವ್ಯಾಟ್ ( megavat) ವಿದ್ಯುತ್‌ಗೆ ಬೇಡಿಕೆ ಇದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 9,032 ಮೆಗಾವ್ಯಾಟ್‌ಗೆ ಬೇಡಿಕೆ ಇತ್ತು.

ರಾಜ್ಯದಲ್ಲಿ ನಿತ್ಯ 10 ಸಾವಿರ ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದ್ದು ಕೇಂದ್ರ ಮತ್ತು ಹೊರ ರಾಜ್ಯಗಳಿಂದ 3 ಸಾವಿರ ಮೆಗಾವ್ಯಾಟ್ ಪೂರೈಕೆ ಆಗುತ್ತಿದೆ. ನಿತ್ಯ 2 ಸಾವಿರ ಮೆಗಾವ್ಯಾಟ್‌ನಷ್ಟು ವಿದ್ಯುತ್ ಕೊರತೆಯಿದೆ. ಅಲ್ಪಾವದಿಯ ಟೆಂಡರ್ ಮೂಲಕ ವಿದ್ಯುತ್ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಪ್ರತಿ ಜಿಲ್ಲೆಗೂ ನೋಡಲ್ ಅಧಿಕಾರಿ ಮೂಲಕ ವಿದ್ಯುತ್ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದೆ.

ರಾಜ್ಯ ದ ವಿದ್ಯುತ್ ಬಳಕೆ ಅಂಕಿ ಅಂಶ ಹೀಗಿದೆ:-

1)ರಾಜ್ಯದಲ್ಲಿ ಒಟ್ಟು ಗೃಹ ಬಳಕೆದಾರರ ಸಂಖ್ಯೆ – 2 ಕೋಟಿ

2) ರಾಜ್ಯದ ಉಚಿತ ವಿದ್ಯುತ್ ಫಲಾನುಭವಿಗಳು – 1.50 ಕೋಟಿ

3) ರಾಜ್ಯದ ಕೃಷಿ ಪಂಪ್‌ಸೆಟ್ ಸಂಖ್ಯೆ – 32 ಲಕ್ಷ

4) ಬೃಹತ್ ಕೈಗಾರಿಕೆಗಳ ಸಂಖ್ಯೆ – 15,147

4)ಸಣ್ಣ ಕೈಗಾರಿಕೆಗಳ ಸಂಖ್ಯೆ – 5.35 ಲಕ್ಷ

5) 1.50 ಲಕ್ಷ ಹೊಸ ಪಂಪ್‌ಸೆಟ್‌ಗೆ ಈವರೆಗೂ ಸಂಪರ್ಕ ದೊರೆತಿಲ್ಲ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!