Weather report: ರಾಜ್ಯದ ಈ ಭಾಗದಲ್ಲಿ ಸುರಿಯಲಿದೆ ಮಳೆ

252

ಬೆಂಗಳೂರು:- ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದಿಂದ ಹಲವು ಭಾಗದಲ್ಲಿ ಅಕಾಲಿಕ ಮಳೆಯಾಗಿತ್ತಿದೆ. ಈ ದಿನ ಎಲ್ಲೆಲ್ಲಿ ಮಳೆ ಹೇಗಿದೆ ವಾತಾವರಣ ( weather report) ಎಂಬ ಮಾಹಿತಿ ಇಲ್ಲಿದೆ.

ದಕ್ಷಿಣ ಕನ್ನಡ – ಕಾಸರಗೋಡು ಗಡಿ ಭಾಗಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ:- Ayodhya Rama Mandir -ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಪ್ರತಿಮೆ ಆಯ್ಕೆ| ಶ್ರಮದ ಹಿಂದಿನ ಸ್ಟೋರಿ ಇಲ್ಲಿದೆ

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸೂಚನೆಗಳಿವೆ.

ಉಳಿದಂತೆ ಕರ್ನಾಟಕದ (karnataka)ವಿವಿಧ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರೆಯಲಿದ್ದು ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ:- ಭಲೇ ತೂಕದ ಬಂಗುಡೆ ಮೀನು! ದೇಶದ ಅತೀ ದೊಡ್ಡ ಬಂಗುಡೆ ಮೀನು ಕಾರವಾರದಲ್ಲಿ ಪತ್ತೆ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!