ರಾಜ್ಯದಲ್ಲಿ ಮುಂದುವರೆದ ಮಳೆ|ಇಂದಿನ ಹವಾಮಾನ ವಿವರ ನೋಡಿ.

83

ಬೆಂಗಳೂರು :- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಸೆ.11ರ ವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕಾರವಾರವಾರದಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು ಅಲ್ಪ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಾದರೆ ಮಂಗಳೂರು: 28-24, ಶಿವಮೊಗ್ಗ: 29-22,ಉಡುಪಿ: 29-24 ಕಾರವಾರ: 30-26,ಹುಬ್ಬಳ್ಳಿ: 30-22 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!