Karwar:ಪೊಲೀಸರ ಮೇಲೆ ಹಲ್ಲೆ 10 ಜನರ ಬಂಧನ

TextMaster 11 12 01.22.05 TextMaster 11 12 01.22.05

ಕಾರವಾರ :- ಕಾರವಾರದಲ್ಲಿ ಯುವಕರ ಗುಂಪಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಕಾರವಾರದ ಬೈತಖೋಲ್ ಪ್ರದೇಶದಲ್ಲಿ ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿಗಳಾದ ಗಣೇಶ ಕುರಿಯವರ್, ಹರೀಶ ಗವಾಣಿಕರ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಗಳಾಗಿದ್ದು ಗಾಯಗೊಂಡ ಪೊಲೀಸರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ‌.

ಘಟನೆ ಸಂಬಂಧ ನಗರ ಠಾಣೆ ಪೊಲೀಸರಿಂದ 11 ಜನರ ಬಂಧನ ಮಾಡಿದ್ದಾರೆ.ಬಂಧಿತರು ಕಾರವಾರದ
ಸುನೀಲ ಗೌಡ, ಮಂಜುನಾಥ ಗೌಡ, ಸಂದೇಶ್, ರಘುವೀರ, ನಿತಿನ್ ಗೌಡ, ಗಗನ ಗೌಡ, ಅನುರಾಗ ಗೌಡ, ಉಮೇಶ್ ಜನಕಪ್ರಸಾದ್, ವಿತೇಶ ಗೌಡ, ಯುವರಾಜ ಗೌಡ, ಸುಚಿತ ಗೌಡ ಎಂಬುವವರಾಗಿದ್ದು ,ತಡರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರು ಗುಂಪು ಸೇರಿಕೊಂಡಿದ್ದ ಯುವಕರಿಗೆ ಮನೆಗೆ ತೆರಳುವಂತೆ ಬುದ್ದಿವಾದ ಹೇಳಿದ್ದರು. ಇದನ್ನು ಪ್ರಶ್ನಿಸಿ ಇಬ್ಬರು ಪೊಲೀಸರ ಮೇಲೆ 11 ಜನ ಹಲ್ಲೆ ನಡೆಸಿದ್ದರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement