ಕಾರಿನಲ್ಲಿ ಸಾಗಿಸುತಿದ್ದ 33.840 ಲೀಟರ್ ಗೋವಾ ಮದ್ಯ ವಶಕ್ಕೆ

504

ಕಾರವಾರ:- ಮಂಗಳೂರು, ಕಾರವಾರ ಅಬಕಾರಿ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿ
ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಕಾರು ವಶಕ್ಕೆ ಪಡೆದ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳಾದ
ಕಾರವಾರ ತಾಲ್ಲೂಕಿನ ಉಳಗಾ ಮೂಲದ
ಕಾಶಿನಾಥ ಆನಂದ ಜಾಧವ, ರಾಜನ್ ಪಾಟೀಲ ನನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಗೋವಾ ನೋಂದಣಿಯ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತಿದ್ದು ,ಕಾರಿನಲ್ಲಿದ್ದ ಸುಮಾರು 33.840 ಲೀಟರ್ ಗೋವಾ ಮದ್ಯ ವಶಕ್ಕೆ ಪಡೆಯಲಾಗಿದೆ.

ಕಾರು ಹಾಗೂ ಮದ್ಯ ಸೇರಿ 3,12,040 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದ್ದು ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!