Karwar| ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ-24 ಮೀನುಗಾರರ ರಕ್ಷಣೆ

ಕಾರವಾರ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ | 24 ಮೀನುಗಾರರ ರಕ್ಷಣೆ | ₹80 ಲಕ್ಷ ನಷ್ಟ ಕಾರವಾರ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ | 24 ಮೀನುಗಾರರ ರಕ್ಷಣೆ | ₹80 ಲಕ್ಷ ನಷ್ಟ

ವಿಡಿಯೋ ನೋಡಿ:

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar) ಅಂಜದೀವ್ ದ್ವೀಪದ ಸಮೀಪ ಅರಬ್ಬಿ ಸಮುದ್ರದಲ್ಲಿ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಬೆಳ್ಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಬೋಟ್ ಹಾಗೂ ಮೀನುಗಾರಿಕಾ ಪರಿಕರಗಳಿಗೆ ಸೇರಿ ಸುಮಾರು ₹80 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವ ಅಂದಾಜಿದೆ. ಬೋಟ್ ಮುಳುಗಡೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement