


ಕಾರವಾರ :- ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನ ಖಂಡಿಸಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ವೈದ್ಯರು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ನಗರದ ಕಾರವಾರ ಮೆಡಿಕಲ್ ಕಾಲೇಜಿನ ಎದುರು ಜಮಾಯಿಸಿದ ಕ್ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸ್ಥಾನಿಕ ವೈದ್ಯರು ಸರ್ಕಾರದ ವಿರುದ್ಧ ಘೋಷಣಾ ಫಲಕಗಳನದನ ಹಿಡಿದು ಶಾಂತಿಯುತವಾಗಿ ಪ್ರತಿಭಟಿಸಿದರು.

ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ರಾಜ್ಯದಾದ್ಯಂತ ವೈದ್ಯರು ಸೇವೆಯನ್ನ ಸಲ್ಲಿಸಿದ್ದಾರೆ. ಆದರೆ ವೈದ್ಯರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನ ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದ್ದು ಇದರಿಂದಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಶೀಘ್ರದಲ್ಲಿ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.