Karwar |ಕಾರವಾರ: ಕಾಳಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆದು ದೋಣಿಯ ಮೂಲಕ ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ದೋಣಿಯನ್ನು ಹಿಡಿದ ಘಟನೆ ಬೆಳಕಿಗೆ ಬಂದಿದೆ. ವಿಷಯ ಕಂದಾಯ ಇಲಾಖೆ ಹಾಗೂ ತಹಸೀಲ್ದಾರ್ ಅವರ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದೋಣಿಯನ್ನ ವಶಕ್ಕೆ ಪಡೆದಿದ್ದರು.ಆದರೇ ಈ ವಿಷಯ ಪ್ರಭಾವಿ ರಾಜಕಾರಣಿಯೊಬ್ಬರ ಕಿವಿಗೆ ಬಿದ್ದು ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಆಗ ಮರಳನ್ನು ಬೋಟಿನಿಂದ ತೆರವುಗೊಳಿಸಿ ಆರೋಪಿಗಳನ್ನ ದೋಣಿ ಸಮೇತ ಬಿಟ್ಟುಕಳಿಸಿದ್ದಾರಂತೆ .ಇನ್ನು ದೋಣಿಯಿಂದ ಹೊರಹಾಕಿದ ಮರಳನ್ನು ಅಧಿಕಾರಿಗಳು ಗ್ರಾಮದ ಜನರ ಒತ್ತಡಕ್ಕೆ ಮಣಿದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಕಾರವಾರದ ಹೋಟೆಗಾಳಿ ಪ್ರದೇಶದ ಕಾಳಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ನದಿಯಿಂದ ಮರಳನ್ನು ತೆಗೆದು ದೋಣಿಯ ಮೂಲಕ ಸಾಗಿಸುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ದೋಣಿಯನ್ನು ಹಿಡಿದಿದ್ದರು. ಈ ಬಗ್ಗೆ ಕಂದಾಯ ಇಲಾಖೆ ಮತ್ತು ತಹಸೀಲ್ದಾರ್ ಅವರ ಗಮನಕ್ಕೆ ಬಂದ ತಕ್ಷಣ ಸಂಬಂಧಪಟ್ಟ ಕಂದಾಯ ನಿರೀಕ್ಷಕರನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ಆದರೆ, ಅಧಿಕಾರಿಗಳು ಸ್ಥಳಕ್ಕೆ ತಲುಪುವ ಮೊದಲೇ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಕರೆಮಾಡಿ ದಂಧೆ ಕೋರರು ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಸ್ಥಳೀಯರು ಹಿಡಿದಿದ್ದ ದೋಣಿಯನ್ನು ಬಿಡಿಸಲು ಯಾರಿಂದ ಒತ್ತಡ ಬಂದಿತ್ತು ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ದೋಣಿಯನ್ನು ಹಿಡಿದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊರಬರಬೇಕಿದ್ದು, ಈ ವಿಚಾರದಲ್ಲಿ ಪಾರದರ್ಶಕ ತನಿಖೆ ನಡೆಯಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.Karwar | ಈ ಊರಲ್ಲಿ ಸತ್ತವರಿಗೆ ಸ್ಮಶಾನದಲ್ಲೂ ಇಲ್ಲ ನೆಮ್ಮದಿ
ಇನ್ನೊಂದೆಡೆ, ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕಾದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲಿ ಲಭ್ಯವಿರುವ ಜಿಪಿಎಸ್ ಫೋಟೊ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿ, ಅದರಲ್ಲಿರುವ ದೋಣಿ ಯಾರಿಗೆ ಸೇರಿದ್ದು ಎಂಬುದನ್ನು ಪತ್ತೆಹಚ್ಚಬೇಕು. ಅಕ್ರಮ ಮರಳುಗಾರಿಕೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕಾಳಿ ನದಿಯ ನೈಸರ್ಗಿಕ ಸಂಪತ್ತಿನ ರಕ್ಷಣೆಗೆ ಕಂದಾಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
