BREAKING NEWS
Search

ಕಾರವಾರ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಹೆದ್ದಾರಿ ಬಂದ್

934

ಕಾರವಾರ:– ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ಬೈತಖೋಲ್ ವಾಣಿಜ್ಯ ಬಂದರಿನಿಂದ ಬಿಲ್ಟ್ ವೃತ್ತದವರೆಗೆ ಹಾಗೂ ರೈಲ್ವೆ ನಿಲ್ದಾಣಕ್ಕೆ ಸಾಗುವ ಹಬ್ಬುವಾಡದಿಂದ ಶಿರವಾಡದವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಇಲ್ಲಿನ ವಾಣಿಜ್ಯ ಬಂದರು ಎದುರಿನ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ ಕೆಲ ತಿಂಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನಸವಾರರು ಮತ್ತು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿಗಾಗಿ ಹಿಂದೆ ಮನವಿ ನೀಡಿದ್ರು ಕೂಡ ಯಾರೂ ಕೂಡ ಗಮನಹರಿಸಿಲ್ಲ. ಹೀಗಾಗಿ ಇಂದು ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!